ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಉದಯ್‌ ಲಲಿತ್‌, ಜ. 29ಕ್ಕೆ ವಿಚಾರಣೆ

Last Updated 10 ಜನವರಿ 2019, 6:09 IST
ಅಕ್ಷರ ಗಾತ್ರ

ನವದೆಹಲಿ:ಅಯೋಧ್ಯೆಯ ವಿವಾದಿತ ಭೂಪ್ರದೇಶ ಹಂಚಿಕೆ ಪ್ರಕರಣದ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಲಾಗಿದೆ.

ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಉದಯ್‌ ಲಲಿತ್‌ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು 29ಕ್ಕೆ ಮುಂದೂಡಲಾಗಿದೆ.

ಹೊಸ ಪೀಠವನ್ನು ರಚನೆ ಮಾಡಿ ಜನವರಿ 29ರಿಂದ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿರಂಜನ್‌ ಗೊಗೊಯಿ ತಿಳಿಸಿದ್ದಾರೆ.

1994ರಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್ ಅವರ ಪರ ಉದಯ್‌ ಲಲಿತ್‌ ವಾದ ಮಂಡಿಸಿದ್ದರು. ಈ ಬಗ್ಗೆವಕೀಲ ರಾಜೀವ್‌ ಧವನ್‌ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿಉದಯ್‌ ಲಲಿತ್‌ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಸಂವಿಧಾನಿಕ ಪೀಠ ಪೀಠದಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌, ಎಸ್‌.ಎ.ಬೊಬ್ಡೆ, ಎಸ್‌.ವಿ ರಮಣ ಅವರು ಇದ್ದಾರೆ.

ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್‌ ಮಂಡಳಿಗೆ ಹಂಚಿಕೆ ಮಾಡಿ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು. 2018ರ ಅಕ್ಟೋಬರ್ 29ರಂದು ಇವುಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು 2019ರ ಜನವರಿ 4ರಂದು ನಡೆಸುವುದಾಗಿ ಹೇಳಿತ್ತು.

4 ರಂದು ಮೇಲ್ಮನವಿ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠ ಒಂದೇ ನಿಮಿಷದಲ್ಲಿ ವಿಚಾರಣೆ ನಡೆಸಿ ಪ್ರಕರಣವನ್ನು ಹೊಸ ಸಂವಿಧಾನ ಪೀಠಕ್ಕೆ ವರ್ಗಾಯಿಸಿರುವುದಾಗಿ ಹೇಳಿತ್ತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT