ಗುರುವಾರ , ಫೆಬ್ರವರಿ 27, 2020
19 °C

ನಿರ್ಭಯಾ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಪ್ರಜ್ಞೆ ತಪ್ಪಿದ ನ್ಯಾಯಮೂರ್ತಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್. ಬಾನುಮತಿ ಅವರು ಪ್ರಜ್ಞೆ ತಪ್ಪಿರುವ ಘಟನೆ ಶುಕ್ರವಾರ ನಡೆದಿದೆ. 

ಅಪರಾಧಿಗಳ ಪ್ರತ್ಯೇಕ ಮರಣದಂಡನೆ ಕುರಿತಂತೆ ಕೇಂದ್ರ ಸರ್ಕಾರವು ಸಲ್ಲಿಸಿದ್ದ ದಾಖಲೆಗಳ ವಿಚಾರಣೆ ನಡೆಸುವ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಅವರನ್ನು ಕೊಠಡಿಗೆ ಕರೆದೊಯ್ಯಲಾಗಿದೆ. ಬಳಿಕ ಪೀಠವು ವಿಚಾರಣೆಯನ್ನು ಕೆಲಕಾಲ ಮುಂದೂಡಿ ಆದೇಶವನ್ನು ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ.

ಸಾಲಿಸಿಟರ್‌ ಜನರಲ್ ತುಶಾರ್ ಮೆಹ್ತಾ ಮಾತನಾಡಿ, ನ್ಯಾಯಮೂರ್ತಿ ಆರ್. ಬಾನುಮತಿ ಅವರಿಗೆ ತೀವ್ರವಾದ ಜ್ವರವಿತ್ತು ಮತ್ತು ಈಗಲೂ ಅವರು ಜ್ವರದಿಂದ ಬಳಲುತ್ತಿದ್ದಾರೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದಿದ್ದಾರೆ. 

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ವೈದ್ಯಕೀಯ ವರದಿಯ ಪ್ರಕಾರ ಅಪರಾಧಿ ವಿನಯ್ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗಿದ್ದಾನೆ. ಹೀಗಾಗಿ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಕ್ರಮಕ್ಕೆ ಯಾವುದೇ ನ್ಯಾಯಾಂಗ ಪರಿಶೀಲನೆಯ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು