ಗುರುವಾರ , ಸೆಪ್ಟೆಂಬರ್ 24, 2020
28 °C

ಎಸ್‌.ಎ ಬೋಬ್ಡೆ ಮುಂದಿನ ಸಿಜೆಐ: ನ.18ರಂದು ಪ್ರಮಾಣವಚನ

ಏಜನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಯನ್ನಾಗಿ ನ್ಯಾ. ಶರದ್‌ ಅರಂವಿದ ಬೋಬ್ಡೆ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ನೇಮಕ ಮಾಡಿದ್ದಾರೆ.

ಈಗಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ನವೆಂಬರ್‌ 17ರಂದು ನಿವೃತ್ತರಾಗುತ್ತಿದ್ದಾರೆ. ಅದರ ಮರುದಿನ, ನ. 18ರಂದು ಬೋಬ್ಡೆ ಅವರು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಅದರೊಂದಿಗೆ ಬೋಬ್ಡೆ ಸುಪ್ರೀಂ ಕೋರ್ಟ್‌ನ 47ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಅವರ ಅಧಿಕಾರವಧಿ 2021ರ ಏಪ್ರಿಲ್‌ 23ರ ವರೆಗೆ ಇರಲಿದೆ.

ನ.17ರಂದು ನಿವೃತ್ತರಾಗುತ್ತಿರುವ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ಬೊಬ್ಡೆ ಅವರ ಹೆಸರನ್ನು ಮುಂದಿನ ಮುಖ್ಯನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು ಎಂದು ಹೇಳಲಾಗಿದೆ.

ಎಸ್.ಎ ಬೋಬ್ಡೆ ಅವರು ಮಹಾರಾಷ್ಟ್ರ ಮೂಲದವರು. ಮದ್ರಾಸ್‌ ಹೈಕೋರ್ಟ್‌, ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ಅವರು ಕರ್ತವ್ಯ ನಿರ್ವಹಿಸಿದ್ದಾರೆ. 2013ರಲ್ಲಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು