ಶನಿವಾರ, ಜೂನ್ 19, 2021
26 °C

ಜ್ಯೋತಿರಾದಿತ್ಯ ಸಿಂಧಿಯಾಗೆ ಕೊರೊನಾವೈರಸ್ ಸೋಂಕು; ದೆಹಲಿ ಆಸ್ಪತ್ರೆಗೆ ದಾಖಲು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Jyothiraditya Scindia

ನವದೆಹಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೆ ಕೊರೊನಾವೈರಸ್ ಸೋಂಕು ಇರುವುದಾಗಿ ದೃಢಪಟ್ಟಿದೆ. ಇವರಿಬ್ಬರು ದಕ್ಷಿಣ ದೆಹಲಿಯ ಸಾಕೇತ್‌ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೊನಾವೈರಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿತ್ತು. ಆದರೆ ಅವರ ತಾಯಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ.

ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ವಕ್ತಾರ ಸಂಬೀತ್ ಪಾತ್ರಾ ಅವರಿಗೆ ಕೊರೊನಾಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದು, ಗುರ್‌ಗಾಂವ್‌ನಲ್ಲಿರುವ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಸಂಬೀತ್ ಪಾತ್ರಾ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಮನೆಗೆ  ಹೋಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು