ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಹಿಂಪಡೆದ ಕೆ.ಸುರೇಂದ್ರನ್: ಮಂಜೇಶ್ವರ ವಿಧಾನಸಭಾ ಉಪಚುನಾವಣೆಗೆ ಸಿದ್ಧ 

Last Updated 21 ಜೂನ್ 2019, 11:50 IST
ಅಕ್ಷರ ಗಾತ್ರ

ಕೊಚ್ಚಿ: ಮಂಜೇಶ್ವರ ವಿಧಾನಸಭಾ ಚುನಾವಣೆಯಲ್ಲಿ ಅವ್ಯವಹಾರ ನಡೆದ ಕಾರಣ ಪಿ.ಬಿ. ಅಬ್ದುಲ್ ರಜಾಕ್ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದ್ದಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್, ಆ ಅರ್ಜಿಯನ್ನು ವಾಪಸ್ ಪಡೆಯಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಹಿಂಪಡೆಯುವ ನಿರ್ಧಾರಕ್ಕೆ ಹೈಕೋರ್ಟ್ ಸಮ್ಮತಿಸಿದ್ದು, ಈ ಪ್ರಕರಣಕ್ಕಾಗಿ ನ್ಯಾಯಾಲಯದ ಖರ್ಚು ₹42,000 ಪಾವತಿ ಮಾಡಬೇಕೆಂದು ಆದೇಶಿಸಿದೆ.

ಸುರೇಂದ್ರನ್ ಈ ಅರ್ಜಿ ಹಿಂಪಡೆದಿದ್ದರಿಂದ ಕೇರಳದ ಪಾಲಾವಿಧಾನಸಭಾ ಕ್ಷೇತ್ರದೊಂದಿಗೆಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿಯೂ ಉಪಚುನಾವಣೆ ನಡೆಯಲಿದೆ.

ಮಂಜೇಶ್ವರ ಚುನಾವಣೆ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಮತ್ತು ಸಿಪಿಎಂ ಅಕ್ರಮ ಮತದಾನ ನಡೆಸಿದೆ ಎಂದು ಸುರೇಂದ್ರನ್ ಕೋರ್ಟ್ ಮೆಟ್ಟಿಲು ಹತ್ತಿದ್ದರು.

2016ರಲ್ಲಿ ನಡೆದ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಜಾಕ್ ಅವರ ವಿರುದ್ಧ ಸ್ಪರ್ಧಿಸಿದ್ದ ಸುರೇಂದ್ರನ್ 89 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಮತದಾನದಲ್ಲಿ ಅಕ್ರಮ ನಡೆದಿದೆ. ಲೀಗ್ ಮತ್ತು ಸಿಪಿಎಂ ಕಳ್ಳಮತಗಳನ್ನು ಚಲಾಯಿಸಿ ಯುಡಿಎಫ್ ಗೆಲ್ಲುವಂತೆ ಮಾಡಿದ್ದಾರೆ. ಹಾಗಾಗಿ ತನ್ನನ್ನು ವಿಜಯಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿ ಸುರೇಂದ್ರನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ ಅಬ್ದುಲ್ ರಜಾಕ್ ಮೃತರಾಗಿದ್ದರು. ಆದರೂ ಸುರೇಂದ್ರನ್ ಕೇಸ್ ವಾಪಸ್ ಪಡೆಯಲು ಮುಂದಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT