ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಹತ್ಯೆ: ಪ್ರಕರಣದ ಮೇಲ್ವಿಚಾರಣೆ ಕೈಬಿಟ್ಟ ‘ಸುಪ್ರೀಂ’

Last Updated 17 ಜನವರಿ 2020, 19:50 IST
ಅಕ್ಷರ ಗಾತ್ರ

ನವದೆಹಲಿ: ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ, ವಿಚಾರವಾದಿಗಳಾದ ಪ್ರೊ.ನರೇಂದ್ರ ದಾಭೋಲ್ಕರ್‌, ಗೋವಿಂದ ಪಾನ್ಸರೆ ಅವರ ಹತ್ಯೆ ಕುರಿತ ತನಿಖೆಯ ಮೇಲ್ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ಕೈಬಿಟ್ಟಿತು.

‘ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಸೆಷನ್ಸ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಇನ್ನೂ ಪತ್ತೆ ಮಾಡಿಲ್ಲ. ಹೀಗಾಗಿ ತನಿಖೆಯ ಮೇಲ್ವಿಚಾರಣೆ ನಡೆಸುವುದರಲ್ಲಿ ಯಾವುದೇ ಅರ್ಥ ಇಲ್ಲ’ ಎಂದು ನ್ಯಾಯಮೂರ್ತಿಗಳಾದ ಆರ್‌.ಎಫ್‌.ನರಿಮನ್‌, ಎಸ್‌.ರವೀಂದ್ರ ಭಟ್‌ ಅವರಿರುವ ಪೀಠ ಅಭಿಪ್ರಾಯಪಟ್ಟಿದೆ. ಕರ್ನಾಟಕ ಸರ್ಕಾರ ಪರ ಹಾಜರಿದ್ದ ಹಿರಿಯ ವಕೀಲ ದೇವದತ್ತ ಕಾಮತ್‌, ‘ಕರ್ನಾಟಕ ಹೈಕೋರ್ಟ್‌ ಸಹ ತನಿಖೆಯ ಮೇಲ್ವಿಚಾರಣೆಯನ್ನು ನಿಲ್ಲಿಸಿದೆ’ ಎಂದು ಹೇಳಿದರು.

‘ಕರ್ನಾಟಕ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ. ತಾರ್ಕಿಕ ಅಂತ್ಯ ಕಾಣುವವರೆಗೆ ಕೋರ್ಟ್‌ ತನಿಖೆಯ ಮೇಲ್ವಿಚಾರಣೆ ನಡೆಸಬೇಕು’ ಎಂದು ಕೋರಿ ಕಲಬುರ್ಗಿ ಅವರ ಪತ್ನಿ ಉಮಾದೇವಿ 2017ರಲ್ಲಿ ಕೋರ್ಟ್‌ ಮೆಟ್ಟಿಲೇರಿದ್ದರು. ನಂತರ, ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ಕಳೆದ ವರ್ಷ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT