ಬುಧವಾರ, ಜನವರಿ 29, 2020
28 °C
ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿ ಪ್ರತಿಕ್ರಿಯೆ

ಯುವಕರ ಪ್ರಶ್ನೆಗಳನ್ನು ಹತ್ತಿಕ್ಕುವುದು ಸರಿಯಲ್ಲ: ಕಮಲ ಹಾಸನ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಯುವಕರ ಪ್ರಶ್ನೆಗಳನ್ನು ಹತ್ತಿಕ್ಕುವುದೆಂದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ ಎಂದು ನಟ, ರಾಜಕಾರಣಿ ಕಮಲ ಹಾಸನ್ ಹೇಳಿದ್ದಾರೆ.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ‘ಯುವಕರು ರಾಜಕೀಯವಾಗಿ ಜಾಗೃತರಾಗಿರಬೇಕು. ಅವರು ಪ್ರಶ್ನೆ ಕೇಳಬೇಕು. ಅವರ ಪ್ರಶ್ನೆಗಳನ್ನು ಹತ್ತಿಕ್ಕಲಾಗುತ್ತಿದೆ ಎಂದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥ. ನಾನೂ ಒಬ್ಬ ವಿದ್ಯಾರ್ಥಿ (ನನ್ನ ಕ್ಷೇತ್ರದಲ್ಲಿ). ವಿದ್ಯಾರ್ಥಿಗಳ ಪರ ದನಿಯೆತ್ತುವುದನ್ನು ಮುಂದುವರಿಸಲಿದ್ದೇನೆ’ ಎಂದು ಹೇಳಿದ್ದಾರೆ.

ಪೌರತ್ವ (ತಿದ್ದುಪಡಿ) ಮಸೂದೆ ವಿರುದ್ಧದ ಹೋರಾಟವನ್ನು ಕಾನೂನು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲಿದ್ದೇವೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು