ಮಧ್ಯಪ್ರದೇಶ: ನೂತನ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

7
ವಿರೋಧ ಪಕ್ಷಗಳ ನಾಯಕರ ಒಗ್ಗಟ್ಟು ಪ್ರದರ್ಶನ

ಮಧ್ಯಪ್ರದೇಶ: ನೂತನ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

Published:
Updated:

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಕಮಲನಾಥ್ ಅವರು ಸೋಮವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಪ್ರಮಾಣವಚನ ಬೋಧಿಸಿದರು.

ಇದನ್ನೂ ಓದಿ: ಇಂದಿರಾ ಗಾಂಧಿ ‘ಮೂರನೇ ಪುತ್ರ‘ ಕಮಲ ನಾಥ್‌

ಒಗ್ಗಟ್ಟು ಪ್ರದರ್ಶಿಸಿದ ವಿಪಕ್ಷ ನಾಯಕರು: ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೊಟ್ ಅವರ ಪ್ರಮಾಣವಚನ ಕಾರ್ಯಕ್ರಮದಂತೆಯೇ ಮಧ್ಯಪ್ರದೇಶದಲ್ಲೂ ಪ್ರತಿಪಕ್ಷಗಳ ನಾಯಕರು ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ, ಮುಖಂಡರಾದ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲ, ಎಲ್‌‍ಜೆಡಿ ನಾಯಕ ಶರದ್ ಯಾದವ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾದರು.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸಹ ಪ್ರಮಾಣವಚ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಸಿಖ್‌ ವಿರೋಧಿ ಗಲಭೆಯಲ್ಲಿ ಕಮಲನಾಥ್‌ ಪಾತ್ರವೇನು?

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !