ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಡಿ.9ಕ್ಕೆ

7

ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಡಿ.9ಕ್ಕೆ

Published:
Updated:

ತಿರುವನಂತಪುರ: ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಡಿ (ಪಿಪಿಪಿ) ನಿರ್ಮಿಸಲಾದ ಎರಡನೇ ಹಸಿರು ವಲಯ ವಿಮಾನ ನಿಲ್ದಾಣ ಎನಿಸಿರುವ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮವನ್ನು ಡಿ.9ಕ್ಕೆ ನಿಗದಿ ಮಾಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. 

2,300 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಈ ವಿಮಾನ ನಿಲ್ದಾಣವು ಪ್ರಯಾಣಿಕರಿಗಾಗಿ ಎಲ್ಲ ಆಧುನಿಕ ಸೌಲಭ್ಯಗಳನ್ನು ಹೊಂದಿದೆ. 4,000 ಮೀಟರ್‌ ಉದ್ದದ ರನ್‌ ವೇ ಇದ್ದು, 24 ಚೆಕ್‌ ಇನ್‌ ಕೌಂಟರ್‌ಗಳು ಹಾಗೂ 32 ವಲಸಿಗ ಪ್ರಯಾಣಿಕರ ಕೌಂಟರ್‌ಗಳನ್ನು ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೊಚ್ಚಿಯಲ್ಲಿನ ನೆಡುಂಬಸ್ಸೆರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಈ ಏರ್‌ಪೋರ್ಟ್‌ ಅನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗಿದೆ. ಅಲ್ಲದೆ, ಇದು ಕೇರಳದಲ್ಲಿನ ನಾಲ್ಕನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !