ಶನಿವಾರ, ಫೆಬ್ರವರಿ 27, 2021
31 °C

ದೆಹಲಿಗೆ ಹಾರಿದ ಡಿ.ಕೆ ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಚಿವ ಡಿ.ಕೆ ಶಿವಕುಮಾರ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. 

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅವರು ಅವರು ದೆಹಲಿಗೆ ತೆರಳಿದರು. ಡಿಕೆಶಿ ಒಬ್ಬರೇ ದೆಹಲಿಗೆ ತೆರಳಿದ್ದು, ಅವರೊಂದಿಗೆ ಬೇರೆ ಯಾವ ನಾಯಕರೂ ಇರಲಿಲ್ಲ. 

ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 13 ಮಂದಿ ಶಾಸಕರು ಸದ್ಯ ಮುಂಬೈನ ಸೋಫಿಟೆಲ್‌ ಹೋಟೆಲ್‌ನಲ್ಲಿ ತಂಗಿದ್ದಾರೆ. ನಿನ್ನೆಯಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅತೃಪ್ತ ಶಾಸಕರು ಬೆಂಗಳೂರಿಗೆ ಹಿಂದಿರುಗಿ ಬಂದು ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು. 

ಈ ನಡುವೆ ಸರ್ಕಾರದ ‘ಎಲ್ಲ ಮಂತ್ರಿಗಳೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಪುಟ ಪುನಾರಚನೆ ಮಾಡಲಾಗುತ್ತಿದ್ದು, ಅತೃಪ್ತಿ ಇರುವ ಶಾಸಕರೆಲ್ಲರೂ ಮರಳಿ ಬೆಂಗಳೂರಿಗೆ ಬಂದರೆ, ಅವರ ಸಮಸ್ಯೆಗಳನ್ನು ಆಲಿಸಲಾಗುವುದು,’ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಟ್ವಿಟರ್‌ ಮೂಲಕ ಈ ಸಂದೇಶ ರವಾನಿಸಿದ ಬೆನ್ನಿಗೇ ಶಿವಕುಮಾರ್‌ ಅವರು ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು