ಭಾನುವಾರ, ಜೂಲೈ 12, 2020
22 °C

ಕೊರೊನಾ: ಚೇತರಿಕೆ ಪ್ರಮಾಣ ಕರ್ನಾಟಕ, ತಮಿಳುನಾಡಿನಲ್ಲೇ ಹೆಚ್ಚು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Coronavirus

ನವದೆಹಲಿ: ಕೊರೊನಾ ವೈರಸ್ ಸೋಕಿನಿಂದ ಗುಣಮುಖರಾಗುವವರ ಪ್ರಮಾಣ ಕರ್ನಾಟಕ, ತಮಿಳುನಾಡಿನಲ್ಲಿ ಹೆಚ್ಚಿದೆ. ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ ಕಡಿಮೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇಡೀ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 25ರಷ್ಟಿದೆ. ರಾಜ್ಯಗಳ ಪೈಕಿ ತಮಿಳುನಾಡು ಶೇ 56.75ರ ಚೇತರಿಕೆ ಪ್ರಮಾಣದೊಂದಿಗೆ ಅಗ್ರ ಸ್ಥಾನದಲ್ಲಿದೆ. ಕರ್ನಾಟಕ ಶೇ 39.58ರ ಚೇತರಿಕೆ ಪ್ರಮಾಣ ಹೊಂದಿದ್ದು ಎರಡನೇ ಸ್ಥಾನದಲ್ಲಿದೆ.

ದೆಹಲಿ, ರಾಜಸ್ಥಾನ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರಗಳಲ್ಲಿಯೂ ಚೇತರಿಕೆ ಪ್ರಮಾಣ ಶೇ 30ಕ್ಕಿಂತ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್, ಮಹಾರಾಷ್ಟ್ರಗಳಲ್ಲಿ ಗುಣಮುಖರಾಗುವ ಪ್ರಮಾಣ ಕ್ರಮವಾಗಿ ಶೇ 12 ಮತ್ತು 15ರಷ್ಟಿದೆ. ಇದು ಮಧ್ಯಪ್ರದೇಶದಲ್ಲಿ ಶೇ 15.79 ಹಾಗೂ ಪಶ್ಚಿಮ ಬಂಗಾಳದಲ್ಲಿ ಶೇ 16.41ರಷ್ಟಿದೆ.

ಆದಾಗ್ಯೂ, ಚೇತರಿಕೆ ಪ್ರಮಾಣವು ಲೆಕ್ಕಾಚಾರಕ್ಕೆ ಸರಿಯಾದ ಮಾನದಂಡವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೆಲವು ರಾಜ್ಯಗಳಲ್ಲಿ ಎರಡು ವಾರಗಳ ಹಿಂದೆಯಷ್ಟೇ ಹೆಚ್ಚು ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಇವರು ಗುಣಮುಖರಾಗುವ ಸಾಧ್ಯತೆ ಹೆಚ್ಚಿದೆ. ಅಷ್ಟರಲ್ಲಿ ಆ ರಾಜ್ಯಗಳ ಚೇತರಿಕೆ ಪ್ರಮಾಣವೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.

ಆದರೆ, ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಕೊರೊನಾ ಸೋಂಕು ಎದುರಿಸುವ ನಿಟ್ಟಿನಲ್ಲಿ ಕರ್ನಾಟಕದ ಸಾಮರ್ಥ್ಯ ಹೆಚ್ಚಿದೆ ಎನ್ನಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು