ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

ಭಾನುವಾರ, ಮೇ 26, 2019
22 °C

ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

Published:
Updated:

ಪೆರಿಯ: ಕಾಸರಗೋಡಿನ ಪೆರಿಯದಲ್ಲಿ ನಡೆದ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣದ ಆರೋಪಿ ಸಿಪಿಎಂ ಸ್ಥಳೀಯ ಸಮಿತಿ ಮಾಜಿ ಸದಸ್ಯ ಪೀತಾಂಬರನ್‍ನ್ನು ಒಂದು ವಾರ ಪೊಲೀಸ್ ವಶದಲ್ಲಿರಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಅವಳಿ ಕೊಲೆ ಪ್ರಕರಣದ ಆರೋಪಿ ಪಿತಾಂಬರನ್‍ನ್ನು ಬುಧವಾರ ಹೊಸದುರ್ಗ  ಪ್ರಥಮ ದರ್ಜೆ ಮೆಜಿಸ್ಟ್ರೇಟ್ ಕೋರ್ಟ್‍ನಲ್ಲಿ ಹಾಜರು ಪಡಿಸಲಾಗಿತ್ತು.

ಪ್ರಕರಣದ ತನಿಖೆ ಮತ್ತು ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೊಪ್ಪಿಸಬೇಕೆಂದು ಪೊಲೀಸರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಈ ಮನವಿಯನ್ನು ಸ್ವೀಕರಿಸಿ ನ್ಯಾಯಾಲಯ ಈ ಆದೇಶ ನೀಡಿದೆ.

ಇದನ್ನೂ  ಓದಿ: ಕಾಸರಗೋಡಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರ ಕೊಲೆ; ಕೇರಳ ಬಂದ್‌

ಪೆರಿಯದಲ್ಲಿ ನಡೆದ ಕೃಪೇಶ್, ಶರತ್ ಲಾಲ್ ಹತ್ಯೆ ಪ್ರಕರಣ ಸಮಾಜದ ಮನಸಾಕ್ಷಿಯನ್ನು ಬೆಚ್ಚಿಬೀಳಿಸುವ ಅಪರಾಧ ಎಂದು ಹೇಳಿದ ನ್ಯಾಯಾಲಯ, ರಾಜಕೀಯ ಹಗೆ ಕೊಲೆಯಲ್ಲಿ ಅಂತ್ಯ ಕಂಡಿತ್ತು ಎಂದಿದೆ.

ಪಿತಾಂಬರನ್‍ನ್ನು ಮಂಗಳವಾರ ಬಂಧಿಸಿದ್ದು ಬುಧವಾರ ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ದು ಸಾಕ್ಷ್ಯ ಪತ್ತೆ ಮಾಡಲಾಗಿತ್ತು. ಹತ್ಯೆಗಾಗಿ ಬಳಸಿದ ತಲ್ವಾರ್ ಮತ್ತು ಕಬ್ಬಿಣದ ರಾಡ್‍ಗಳು ಪತ್ತೆಯಾಗಿವೆ. ಸಾಕ್ಷ್ಯಗಳನ್ನು ಪತ್ತೆ ಮಾಡಿದ ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. 

ಯುವ ಕಾಂಗ್ರೆಸ್‍ ಕಾರ್ಯಕರ್ತರ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ 

ಹಿಂಸೆಯನ್ನು ಎಂದಿಗೂ ಪ್ರಚೋದಿಸುವುದಿಲ್ಲ: ಪಿಣರಾಯಿ ವಿಜಯನ್
 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !