ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ವಿಜಯೋತ್ಸವದ ವೇಳೆ ಘರ್ಷಣೆ; ಕಲ್ಲು ತೂರಾಟ

Last Updated 16 ಮೇ 2018, 19:30 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ ಪದವು ಬಳಿ ಮಂಗಳವಾರ ರಾತ್ರಿ ಚುನಾವಣಾ ವಿಜಯೋತ್ಸವ ಆಚರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಏಳು ಮಂದಿ ಗಾಯಗೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ಅಡ್ಯಾರ್‌ ಪದವು ವೀರಾಂಜನೇಯ ವ್ಯಾಯಾಮ ಮಂದಿರದ ಬಳಿ ರಾತ್ರಿ 8.30ರ ಸುಮಾರಿಗೆ ವಿಜಯೋತ್ಸವ ಆಚರಿಸುತ್ತಿದ್ದರು. ಆಗ ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿ ಆಗಿದ್ದಾರೆ. ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ಸಹ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ವನಜಾಕ್ಷಯ್ಯ, ಲೋಕೇಶ್, ದೇವಿಪ್ರಸಾದ್, ಅರುಣ್‌, ಅಭಿಜಿತ್‌, ಅಶೋಕ್‌ ಮತ್ತು ಕಾಂಗ್ರೆಸ್ ಕಾರ್ಯಕರ್ತ ಸಫ್ವಾನ್‌ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳೆಲ್ಲರೂ ವೆನ್ಲಾಕ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

‘ಘರ್ಷಣೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ನಗರ ಪೊಲೀಸ್ ಕಮಿಷನರ್‌ ವಿಪುಲ್‌ ಕುಮಾರ್‌ ಪರಿಶೀಲನೆ ನಡೆಸಿದ್ದಾರೆ. ಪರಿಸ್ಥಿತಿ ಈಗ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT