ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ವಿಶೇಷಾಧಿಕಾರ ರದ್ದು: ಸಂವಿಧಾನ ಪೀಠ ರಚನೆ

Last Updated 28 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷಾಧಿಕಾರ ರದ್ದುಪಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಐವರ ನ್ಯಾಯಮೂರ್ತಿಗಳ ಸಂವಿಧಾನ ಪೀಠ ರಚಿಸಿದೆ.

ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ನೇತೃತ್ವದಲ್ಲಿ ಈ ಪೀಠ ರಚಿಸಲಾಗಿದ್ದು, ಅಕ್ಟೋಬರ್‌ 1ರಿಂದ ವಿಚಾರಣೆ ಆರಂಭಿಸಲಿದೆ. ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌, ಆರ್‌. ಸುಭಾಷ್‌ ರೆಡ್ಡಿ, ಬಿ.ಆರ್‌. ಗವಾಯಿ ಮತ್ತು ಸೂರ್ಯಕಾಂತಿ ಈ ಪೀಠದಲ್ಲಿದ್ದಾರೆ.

370ನೇ ವಿಧಿ ರದ್ದುಪಡಿಸುವ ಕುರಿತಂತೆ ಇರುವ ಸಾಂವಿಧಾನಿಕ ಅವಕಾಶಗಳು ಮತ್ತು ರಾಷ್ಟ್ರಪತಿ ಆದೇಶಕ್ಕೆ ಸಂಬಂಧಿಸಿದಂತೆ ಪೀಠವು ಪರಿಶೀಲನೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು ಆಗಸ್ಟ್‌ 28ರಂದು ಈ ಅರ್ಜಿಗಳನ್ನು ಸಂವಿಧಾನಪೀಠಕ್ಕೆ ವರ್ಗಾಯಿಸಿತ್ತು. ನ್ಯಾಷನಲ್‌ ಕಾನ್ಫೆರೆನ್ಸ್‌ ಮುಖಂಡರು ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT