ಮಂಗಳವಾರ, ಸೆಪ್ಟೆಂಬರ್ 28, 2021
25 °C

ಕಾಶ್ಮೀರಿ ಪಂಡಿತರಿಂದ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು: ದಕ್ಷಿಣ ಕಾಶ್ಮೀರದಲ್ಲಿ ಕಿಡಿಗೇಡಿಗಳು ಸೇಬು ಹಣ್ಣಿನ ತೋಟ ನಾಶಪಡಿಸಿರುವುದನ್ನು ಖಂಡಿಸಿ ಕಾಶ್ಮೀರಿ ಪಂಡಿತರ ಗುಂಪೊಂದು ಸೋಮವಾರ ಪ್ರತಿಭಟನೆ ನಡೆಸಿದೆ. 

ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಸಮುದಾಯದಲ್ಲಿ ಅಸ್ಥಿರತೆ ಮೂಡಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದ್ದು, ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಸೇಬು ಹಣ್ಣಿನ ತೋಟದ ಮಾಲೀಕ ಅಜಯ್ ರೈನಾ, ‘2 ದಿನದ ಹಿಂದಷ್ಟೇ ಕಾಶ್ಮೀರದಿಂದ ಜಮ್ಮುವಿಗೆ ಬಂದಿದ್ದೆ. ಈ ಸಂದರ್ಭದಲ್ಲಿ ಅನಂತ್‌ನಾಗ್ ಜಿಲ್ಲೆಯ ಅಕುರ ಹಳ್ಳಿಯಲ್ಲಿರುವ ನನ್ನ ಸೇಬು ಹಣ್ಣಿನ ತೋಟವನ್ನು ಕಿಡಿಗೇಡಿಗಳು ರಾತ್ರಿ ವೇಳೆ ಹಾನಿಗೊಳಿಸಿರುವ ಕುರಿತು ಮಾಹಿತಿ ಲಭಿಸಿತು’ ಎಂದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು