ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಸಿ.ರಾಮಮೂರ್ತಿ ನಾಮಪತ್ರ ಸಲ್ಲಿಕೆ

Last Updated 29 ನವೆಂಬರ್ 2019, 20:10 IST
ಅಕ್ಷರ ಗಾತ್ರ

ಬೆಂಗಳೂರು: ಡಿಸೆಂಬರ್‌ 12ರಂದು ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಈ ಹಿಂದೆ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆ ಆಗಿದ್ದ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಬಿಜೆಪಿ ಸೇರಿ ಮತ್ತೆ ಚುನಾವಣೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಯಾರೂ ನಾಮಪತ್ರ ಸಲ್ಲಿಸಿಲ್ಲ.

ರಾಮಮೂರ್ತಿ ನಾಮಪತ್ರ ಸಲ್ಲಿಸುವಾಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌, ಕಂದಾಯ ಸಚಿವ ಆರ್‌.ಅಶೋಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT