ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಕೆಸಿಆರ್‌ ಸಂಪುಟಕ್ಕೆ ಮಗ, ಸೋದರಳಿಯ ಸೇರ್ಪಡೆ

Last Updated 9 ಸೆಪ್ಟೆಂಬರ್ 2019, 1:14 IST
ಅಕ್ಷರ ಗಾತ್ರ

ಹೈದರಾಬಾದ್:ತೆಲಂಗಾಣ ಸರ್ಕಾರದ ಸಚಿವ ಸಂಪುಟವನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಭಾನುವಾರ ವಿಸ್ತರಿಸಿದ್ದಾರೆ. ಸೋಮವಾರ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನಾದಿನ ಈ ಬೆಳವಣಿಗೆ ಆಗಿದೆ.

ಚಂದ್ರಶೇಖರ ರಾವ್ ಅವರು ತಮ್ಮ ಮಗ, ತೆಲಂಗಾಣ ರಾಷ್ಟ್ರ ಸಮಿತಿಯ ಕಾರ್ಯಕಾರಿ ಅಧ್ಯಕ್ಷ ಕೆ.ತಾರಕರಾಮ ರಾವ್ ಮತ್ತು ತಮ್ಮ ಸೋದರಳಿಯ ಟಿ.ಹರೀಶ್ ರಾವ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಈ ಇಬ್ಬರೂ ಹಿಂದಿನ ಟಿಆರ್‌ಎಸ್‌ ಸರ್ಕಾರದಲ್ಲಿ ಸಚಿವರಾಗಿದ್ದರು.

ತಾರಕರಾಮ ರಾವ್ ಮತ್ತು ಹರೀಶ್ ರಾವ್ ಅವರನ್ನು ಚಂದ್ರಶೇಖರ ರಾವ್ ಅವರ ಆಪತ್ಬಾಂಧವರು ಎಂದೇ ಪರಿಗಣಿಸಲಾಗುತ್ತದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷೆಯಾಗಿದ್ದ ತಮಿಳ್‌ಸಾಯಿ ಸೌಂದರರಾಜನ್ ಅವರು ತೆಲಂಗಾಣದ ರಾಜ್ಯಪಾಲೆಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಚಂದ್ರಶೇಖರ ರಾವ್ ಅವರು ಈ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಆಡಳಿತಾರೂಢ ಟಿಆರ್‌ಎಸ್‌ ಮತ್ತು ವಿರೋಧ ಪಕ್ಷ ಬಿಜೆಪಿ ಮಧ್ಯೆ ಜಟಾಪಟಿ ಇದ್ದೇ ಇದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರವು ತಮಿಳ್‌ಸಾಯಿ ಅವರನ್ನು ರಾಜ್ಯಪಾಲೆಯಾಗಿ ನೇಮಕ ಮಾಡಿದೆ. ಇದು ಟಿಆರ್‌ಎಸ್ ಮತ್ತು ಬಿಜೆಪಿ ನಡುವೆ ಮತ್ತಷ್ಟು ಜಟಾಪಟಿಗೆ ಕಾರಣವಾಗಬಹುದು. ಇದನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದಲೇ ಸಂಪುಟದಲ್ಲಿ ತಾರಕರಾಮ್ ಮತ್ತು ಹರೀಶ್ ಅವರಿಗೆ ಸ್ಥಾನ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.

ಈ ಇಬ್ಬರನ್ನು ಹೊರತುಪಡಿಸಿ ಇನ್ನೂ ನಾಲ್ವರಿಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ. ಅದರಲ್ಲಿ ಇಬ್ಬರು ಮಹಿಳೆಯರು. ಈ ಮೂಲಕ ತೆಲಂಗಾಣ ಸರ್ಕಾರದ ಸಚಿವ ಸಂಪುಟದ ಸದಸ್ಯರ ಸಂಖ್ಯೆ 18ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT