ಶುಕ್ರವಾರ, ಡಿಸೆಂಬರ್ 13, 2019
17 °C

ಪಶುವೈದ್ಯೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೆಸಿಆರ್‌ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಪಶುವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಆದೇಶಿಸಿದ್ದಾರೆ.

ಪ್ರಕರಣ ನಡೆದ ನಂತರ ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆ ನೀಡಿರುವ ಕೆಸಿಆರ್‌, ಘಟನೆಯನ್ನು ಅಮಾನವೀಯ ಮತ್ತು ಭಯಾನಕ ಎಂದು ವ್ಯಾಖ್ಯಾನಿಸಿದ್ದಾರೆ. 

ಪಶುವೈದ್ಯೆ ಕುಟುಂಬಕ್ಕೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. 

ಇದನ್ನೂ ಓದಿ: ಪಶುವೈದ್ಯೆ ಮೇಲೆ ಅತ್ಯಾಚಾರ, ಬೆಂಕಿ ಹಚ್ಚಿ ಕೊಲೆ: ವ್ಯಾಪಕ ಆಕ್ರೋಶ  

ಮರಣದಂಡನೆ ಶಿಕ್ಷೆಗೆ ಒತ್ತಾಯ

ಕೆಸಿಆರ್ ಪುತ್ರ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಕೆ ಟಿ.ರಾಮರಾವ್‌ ಅವರು ಮಹಿಳೆ ಮತ್ತು ಮಕ್ಕಳ ಮೇಲೆ ಅಪರಾಧ ಎಸಗುವವರಿಗೆ ಮರಣ ದಂಡನೆ ವಿಧಿಸಲು ಕಾನೂನು ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. 

ಈ ವಿಚಾರದ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಮರಾವ್‌, ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವವರನ್ನು ಸಮಯ ವಿಳಂಬ ಮಾಡದೇ ಗಲ್ಲಿಗೇರಿಸಲು ಕಾನೂನು ಬರಬೇಕು ಎಂದಿದ್ದಾರೆ. 

ಇದನ್ನೂ ಓದಿ: ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಹಿಂದಿನ ಭೀಕರತೆ ತೆರೆದಿಟ್ಟ ಪೊಲೀಸ್‌ ದಾಖಲೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು