ಹೈದರಾಬಾದ್: ಲೋಕಸಭಾ ಚುನಾವಣೆಯ ಐದು ಹಂತಗಳ ಮತದಾನ ಪೂರ್ಣಗೊಳ್ಳುತ್ತಿದ್ದಂತೆಯೇ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಂದ ಸಮಾನ ಅಂತರ ಕಾಯ್ದುಕೊಂಡ ಪಕ್ಷಗಳ ಸಂಯುಕ್ತ ರಂಗ ರಚನೆಯ ಚಟುವಟಿಕೆಗಳೂ ಚುರುಕುಗೊಂಡಿವೆ.
ತೆಲಂಗಾಣದ ಮುಖ್ಯಮಂತ್ರಿ, ಟಿಆರ್‌ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರ ಭೇಟಿ ಆರಂಭಿಸಿದ್ದಾರೆ.
ಸೋಮವಾರ ಸಂಜೆ ತಿರುವನಂತಪುರಕ್ಕೆ ತೆರಳಿ ಪಿಣರಾಯಿ ವಿಜಯನ್ ಅವರನ್ನು ಭೇಟಿಮಾಡಿದ್ದಾರೆ.
‘ಮೇ 13ರಂದು ಚೆನ್ನೈಗೆ ಭೇಟಿ ನೀಡಲಿರುವ ಕೆಸಿಆರ್, ಅಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈಗಾಗಲೇ ದೂರವಾಣಿ ಮೂಲಕ ಕೆಸಿಆರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ’ ಎಂದು ತೆಲಂಗಾಣದ ಮುಖ್ಯಮಂತ್ರಿ ಕಚೇರಿಯಿಂದ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.