ತೆಲಂಗಾಣ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಕೆಸಿಆರ್‌ ಪ್ರಮಾಣ ವಚನ ಸ್ವೀಕಾರ

7

ತೆಲಂಗಾಣ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಕೆಸಿಆರ್‌ ಪ್ರಮಾಣ ವಚನ ಸ್ವೀಕಾರ

Published:
Updated:

ಹೈದರಾಬಾದ್: ಟಿಆರ್‌ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್‌ ರಾವ್ ಗುರುವಾರ ತೆಲಂಗಾಣ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಇ.ಎಸ್‌.ಎಲ್.ನರಸಿಂಹನ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ರಾವ್ ಅವರ ಜೊತೆಗೆ ವಿಧಾನ ಪರಿಷತ್ ಸದಸ್ಯ ಮೊಹಮದ್ ಮೆಹಮೂದ್ ಆಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿಂದಿನ ಅವಧಿಯಲ್ಲಿ ಇವರು ಉಪಮುಖ್ಯಮಂತ್ರಿಯಾಗಿದ್ದರು. 

ಟಿಆರ್‌ಎಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಕೆಸಿಆರ್‌ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದರು. ತೆಲಂಗಾಣದಲ್ಲಿ ಡಿ.7ರಂದು ಮತದಾನ ನಡೆದಿತ್ತು. ಡಿ.11ರಂದು ನಡೆದ ಮತಎಣಿಕೆ ನಡೆದಿತ್ತು. 119 ಸದಸ್ಯ ಬಲದ ವಿಧಾನಸಭೆಯಲ್ಲಿ 88 ಸ್ಥಾನ ಗಳಿಸಿದ್ದ ಟಿಆರ್‌ಎಸ್‌  ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ ನೇತೃತ್ವದ ಪ್ರಜಾಕೂಟಮಿ 21 ಮತ್ತು ಬಿಜೆಪಿ ಒಂದು ಸ್ಥಾನ ಗೆಲ್ಲಲು ಮಾತ್ರ ಸಾಧ್ಯವಾಗಿತ್ತು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !