ಗುರುವಾರ , ಜುಲೈ 29, 2021
21 °C

ಲೆಫ್ಟಿನೆಂಟ್ ಗವರ್ನರ್ ನಿರ್ಧಾರಕ್ಕೆ ಮುಖ್ಯಮಂತ್ರಿ ಕೇಜ್ರಿವಾಲ್ ವಿರೋಧ

ಪಿಟಿಐ Updated:

ಅಕ್ಷರ ಗಾತ್ರ : | |

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌– ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್‌–19 ರೋಗಿಗಳು ಐದು ದಿನ ಸಾಂಸ್ಥಿಕ ಕ್ವಾರಂಟೈನಲ್ಲಿರಬೇಕು ಎಂಬ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಲ್‌‌ ಅವರ ಆದೇಶಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ವಿರೋಧ ವ್ಯಕ್ತಪಡಿಸಿದ್ದಾರೆ. 

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸಭೆಯಲ್ಲಿ ಮಾತನಾಡಿದ ಅವರು, ‘ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ಕೋವಿಡ್‌–19 ಸಂಬಂಧಿತ ದೇಶಕ್ಕೆ ಅನ್ವಯವಾಗುವ ನಿಯಮ ರೂಪಿಸಿದೆ. ರೋಗ ಲಕ್ಷಣರಹಿತ ಮತ್ತು ಕಡಿಮೆ ಸೋಂಕು ಲಕ್ಷಣ ಇರುವ ರೋಗಿಗಳು ಮನೆಯಲ್ಲೇ ಪ್ರತ್ಯೇಕವಾಗಿರಲು ಅನುಮತಿ ನೀಡಲಾಗಿದೆ. ಹೀಗಿರುವಾಗ ದೆಹಲಿಗೆ ಪ್ರತ್ಯೇಕ ನಿಯಮ ಮಾಡುವ ಅಗತ್ಯವೇನಿದೆ’ ಎಂದು ಪ್ರಶ್ನಿಸಿದ್ದಾರೆ.

‘ಬಹುತೇಕ ಸೋಂಕಿತರಿಗೆ ರೋಗಲಕ್ಷಣಗಳೇ ಇಲ್ಲ. ಅವರೆಲ್ಲರಿಗೂ ಕ್ವಾರಂಟೈನ್‌ ವ್ಯವಸ್ಥೆ ಮಾಡಲು ಹೇಗೆ ಸಾಧ್ಯ. ರೈಲ್ವೆ ಬೋಗಿಯ ಐಸೋಲೇಷನ್ ವಾರ್ಡ್‌ನಲ್ಲಿ ಬಿಸಿಲಿನ ತಾಪ ಹೆಚ್ಚಿರುತ್ತದೆ. ಅದರಲ್ಲಿ ರೋಗಿಗಳು ಇರುವುದು ಕಷ್ಟವಾಗಲಿದೆ’ ಎಂದಿದ್ದಾರೆ. 

ರೋಗಲಕ್ಷಣ ಇಲ್ಲದವರಿಗೆ ಮತ್ತು ಕಡಿಮೆ ರೋಗ ಲಕ್ಷಣ ಹೊಂದಿರುವವರನ್ನು ಐದು ದಿನ ಸಾಂಸ್ಥಿಕ ಕ್ವಾರಂಟೈನಲ್ಲಿ ಇರಿಸಬೇಕು. ಐದು ದಿನಗಳ ನಂತರ ಮನೆಯಲ್ಲಿ ಅವರು ಪ್ರತ್ಯೇಕವಾಗಿರಬೇಕು ಎಂದು ಲೆಫ್ಟಿನೆಂಟ್‌ ಗವರ್ನರ್‌ ಕಳೆದ ಶುಕ್ರವಾರ ಆದೇಶಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು