ಶುಕ್ರವಾರ, ಏಪ್ರಿಲ್ 3, 2020
19 °C

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ ಕೇಜ್ರಿವಾಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಆಮ್ ಆದ್ಮಿ ಪಕ್ಷದ (ಆಪ್) ನಾಯಕ ಅರವಿಂದ ಕೇಜ್ರಿವಾಲ್ ಭಾನುವಾರ ದೆಹಲಿ ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಗರದ ರಾಮ್‌ಲೀಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಪ್ರಮಾಣ ವಚನ ಬೋಧಿಸಿದರು. ಕೇಜ್ರಿವಾಲ್ ಸಂಪುಟದ ಸದಸ್ಯರಾಗಿರುವ ಆರು ಮಂದಿಯೂ ಇದೇ ಸಂದರ್ಭ ಪ್ರಮಾಣ ವಚನ ಸ್ವೀಕರಿಸಿದರು.

ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ, ಸಚಿವರಾಗಿದ್ದ ಸತ್ಯೇಂದ್ರ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಗೌತಮ್ ಅವರು ಈ ಬಾರಿಯೂ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದಿದ್ದಾರೆ.

ದೆಹಲಿ ವಿಧಾನಸಭೆಯ 70 ಸ್ಥಾನಗಳ ಪೈಕಿ 62 ಸ್ಥಾನಗಳಲ್ಲಿ ಆಪ್ ಜಯಗಳಿಸಿತ್ತು. ಘಟಾನುಘಟಿಗಳ ಪ್ರಚಾರದ ನಡುವೆಯೂ ಬಿಜೆಪಿ 8 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಕಾಂಗ್ರೆಸ್‌ ಶೂನ್ಯಸಂಪಾದಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು