ಪ್ರಧಾನಿ ಮೋದಿ ಭೇಟಿ ಮಾಡಲಿರುವ ಕೇಜ್ರಿವಾಲ್: ಮಹತ್ವದ ಚರ್ಚೆ ಸಾಧ್ಯತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.
ಕಳೆದ ತಿಂಗಳು ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಕೇಜ್ರಿವಾಲ್ ಅವರು ಇದೇ ಮೊದಲ ಬಾರಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.
Delhi Chief Minister Arvind Kejriwal to meet Prime Minister Narendra Modi today in Parliament. pic.twitter.com/jNCxgHXzgK
— ANI (@ANI) March 3, 2020
ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ, ಸಿಎಎ ಪರ–ವಿರೋಧಿ ಗಲಭೆಗಳ ನಿಯಂತ್ರಣ ಕುರಿತು ಪ್ರಧಾನಿ ಮೋದಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ನಡುವೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕಳೆದ ವಾರ ಕೇಜ್ರಿವಾಲ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ದೆಹಲಿಯಲ್ಲಿ ನಡೆದ ಗಲಭೆ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.