ವಾರಾಣಸಿಯಿಂದ ಕೇಜ್ರಿವಾಲ್‌ ಸ್ಪರ್ಧೆ ಇಲ್ಲ

7

ವಾರಾಣಸಿಯಿಂದ ಕೇಜ್ರಿವಾಲ್‌ ಸ್ಪರ್ಧೆ ಇಲ್ಲ

Published:
Updated:

ಲಖನೌ: ಆಮ್‌ ಆದ್ಮಿ  ಪಾರ್ಟಿಯ (ಎಎಪಿ) ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಿಂದ ಸ್ಪರ್ಧಿಸುವುದಿಲ್ಲ. ಆದರೆ, ಈ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲಾಗುವುದು ಎಂದು ಎಎಪಿ ಹೇಳಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಿಂದ ನರೇಂದ್ರ ಮೋದಿ ವಿರುದ್ಧ ಕೇಜ್ರಿವಾಲ್‌ ಸ್ಪರ್ಧಿಸಿದ್ದರು. ದೆಹಲಿ, ಪಂಜಾಬ್‌, ಹರಿಯಾಣ ಮತ್ತು ಗೋವಾ ರಾಜ್ಯಗಳ ಲೋಕಸಭಾ ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳಲ್ಲಿಯೂ ಕಣಕ್ಕಿಳಿಯಲಿದ್ದಾರೆ ಎಂದು ಎಎಪಿ ವಕ್ತಾರ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !