7
ಕೇಂದ್ರದ ನಿರ್ಧಾರದ ವಿರುದ್ಧ ಆಕ್ರೋಶ

ರೈಲು ಭವನದ ಎದುರು ಕೇರಳ ಸಿ.ಎಂ. ಪ್ರತಿಭಟನೆ

Published:
Updated:
ನವದೆಹಲಿಯ ರೈಲುಭವನದ ಎದುರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ಸಂಸದರು ಶುಕ್ರವಾರ ಪ್ರತಿಭಟನೆ ನಡೆಸಿದರು - –ಪಿಟಿಐ ಚಿತ್ರ

ನವದೆಹಲಿ: ಕೇರಳದಲ್ಲಿ ಬೋಗಿಗಳನ್ನು ತಯಾರಿಸುವ ಕಾರ್ಖಾನೆ ಸ್ಥಾಪಿಸುವ ಪ್ರಸ್ತಾವವನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ಸಂಸದರು ಇಲ್ಲಿನ ರೈಲು ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. 

‘ರಾಜ್ಯದಲ್ಲಿ ಎಡಪಕ್ಷಗಳು ಆಡಳಿತ ನಡೆಸುತ್ತಿರುವುದರಿಂದ ಕೇಂದ್ರಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ’ ಎಂದು ವಿಜಯನ್‌ ಆರೋಪಿಸಿದರು. 

‘ಪಾಲಕ್ಕಾಡ್‌ನಲ್ಲಿ ಕಾರ್ಖಾನೆ ಅಗತ್ಯವಿಲ್ಲ ಎಂದು ನಿರ್ಧರಿಸುವ ಕೇಂದ್ರ ಸರ್ಕಾರ, ಹರಿಯಾಣದಲ್ಲಿ ಇಂಥ ಕಾರ್ಖಾನೆ ಪ್ರಾರಂಭಿಸಲು ಉದ್ದೇಶಿಸಿದೆ. ಅಲ್ಲದೆ, ಉತ್ತರಪ್ರದೇಶದಲ್ಲಿ ಬೋಗಿಗಳ ನಿರ್ಮಾಣ ಕಾರ್ಖಾನೆ ಸ್ಥಾಪಿಸುವ ಉದ್ದೇಶದಿಂದ ಭೂಮಿಅಗತ್ಯವಿದೆ ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹೇಳಿಕೆ ನೀಡಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಇದಕ್ಕೆ ಕಾರಣ’ ಎಂದು ಅವರು ಆರೋಪಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !