ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ: ಹೊಸ ನಿಯಮಾವಳಿ

Last Updated 20 ಮಾರ್ಚ್ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಸ್ಥಾನಮಾನ ನೀಡುವ ಉದ್ದೇಶದಿಂದ ನಿಯಮಾವಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.

ಈವರೆಗೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶೇ 25 ರಷ್ಟು ಸೀಟುಗಳನ್ನು ಆಯಾ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುವುದು ಕಡ್ಡಾಯವಾಗಿತ್ತು. ಹೊಸ ನಿಯಮಾವಳಿ ಪ್ರಕಾರ, ನಿರ್ದಿಷ್ಟ ಸಮುದಾಯದ ಬದಲಿಗೆ ಯಾವುದೇ ಭಾಷಾ ಅಥವಾ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪ್ರವೇಶ ನೀಡಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್‌ ಮಾಧ್ಯಮ ಪ್ರತಿನಿಧಿಗಳಿಗೆ ಮಂಗಳವಾರ ತಿಳಿಸಿದರು.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಶೇ 25 ರಷ್ಟು ವಿದ್ಯಾರ್ಥಿಗಳು ಶಿಕ್ಷಣ ಅಭ್ಯಾಸ ಮಾಡುತ್ತಿದ್ದರೆ, ಅಂತಹ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣ ಸಂಸ್ಥೆಗಳಿಗೆ ಹೊಸ ನಿಯಮ ಅನ್ವಯ ಆಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT