ಕೇರಳದತ್ತ ಇಸ್ಲಾಮಿಕ್ ಉಗ್ರರು: ಶ್ರೀಲಂಕಾ ಸರ್ಕಾರದಿಂದ ಮಾಹಿತಿ

ತಿರುವನಂತಪುರ: ಶ್ರೀಲಂಕಾದಿಂದ ಲಕ್ಷದ್ವೀಪ ಮಾರ್ಗವಾಗಿ ಹಡಗಿನಲ್ಲಿ 15 ಇಸ್ಲಾಮಿಕ್ ಸ್ಟೇಟ್ ಉಗ್ರರು ಕೇರಳ ಕರಾವಳಿ ಕಡೆ ಬರುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಕೇರಳ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.
ಕರಾವಳಿ ತೀರಗಳಲ್ಲಿ ಅರೆ ಸೇನಾ ಪಡೆಗಳು, ಕೇರಳ ಪೊಲೀಸರು ಮತ್ತು ಕರಾವಳಿ ರಕ್ಷಣಾ ಪಡೆ ಪೊಲೀಸರು ಗಸ್ತು ತಿರುಗುತ್ತಿದ್ದು ಹಡಗುಗಳನ್ನು ತೀವ್ರವಾಗಿ ತಪಾಸಣೆ ಮಾಡುತ್ತಿದ್ದಾರೆ.
ಮೇ 23ರಂದು 15 ಜನ ಇಸ್ಲಾಮಿಕ್ ಉಗ್ರರು ಹಡಗಿನಲ್ಲಿ ಲಕ್ಷದ್ವೀಪ ಮಾರ್ಗವಾಗಿ ಭಾರತದ ಕಡೆ ಬರುತ್ತಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಕೇರಳ ಸರ್ಕಾರಕ್ಕೆ ಕರಾವಳಿ ತೀರಗಳಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚಿಸಿದೆ.
ಕೇರಳದಲ್ಲಿ ಕೆಲವರು ಇಸ್ಲಾಮಿಕ್ ಸ್ಟೇಟ್ ಉಗ್ರರ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.