ಬುಧವಾರ, ಏಪ್ರಿಲ್ 1, 2020
19 °C

ಸಚಿವ ರವಿಶಂಕರ್ ಪ್ರಸಾದ್‌ಗೆ ಸಮನ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಸಂಸದ ಶಶಿತರೂರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ, ನ್ಯಾಯಾಲಯಕ್ಕೆ ಹಾಜರಾಗಿ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ಮ್ಯಾಜಿಸ್ಟ್ರೇಟ್  (ಸಿಜೆಎಂ) ಸಮನ್ಸ್ ಜಾರಿ ಮಾಡಿದ್ದಾರೆ.

‘ದೂರಿನ ಕುರಿತು ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿರುವ ಸಿಜೆಎ, ಮೇ 2ರ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಚಿವರಿಗೆ ಸೂಚಿಸಿದ್ದಾರೆ’ ಎಂದು ತರೂರ್ ಪರ ವಕೀಲರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಪತ್ನಿ ಸುನಂದಾ ಪುಷ್ಕರ್ ಅವರ ಸಾವಿಗೆ ಸಂಬಂಧಿಸಿ ರವಿಶಂಕರ್ ಪ್ರಸಾದ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ, 2018ರ ಡಿಸೆಂಬರ್‌ನಲ್ಲಿ ತರೂರ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ತಮ್ಮನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ರವಿಶಂಕರ್ ಪ್ರಸಾದ್ ‘ಬೇಷರತ್‌ ಕ್ಷಮೆ’ ಕೋರಬೇಕು ಎಂದು ತರೂರ್‌ ನೋಟಿಸ್‌ ಕಳುಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು