ಸೋಮವಾರ, ಮಾರ್ಚ್ 1, 2021
31 °C

ಕೇರಳಕ್ಕೆ ರಿಲಯನ್ಸ್‌ ಫೌಂಡೇಶನ್‌ದಿಂದ ₹21 ಕೋಟಿ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಅಲಪ್ಪಿ: ಕೇರಳ ಪ್ರವಾಹ ಸಂತ್ರಸ್ತರ ನಿಧಿಗೆ ರಿಲಯನ್ಸ್‌ ಫೌಂಡೇಶನ್‌ ₹21  ಕೋಟಿ ದೇಣಿಗೆ ಹಾಗೂ ₹50 ಕೋಟಿ ಮೊತ್ತದ ಸಾಮಗ್ರಿಗಳನ್ನು ಕೊಡುಗೆ ನೀಡಿದೆ. 

ಫೌಂಡೇಶನ್‌ ಅಧ್ಯಕ್ಷೆ ನೀತಾ ಅಂಬಾನಿ ಅವರು ದೇಣಿಗಯ ಚೆಕ್‌ ಅನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಹಸ್ತಾಂತರಿಸಿದರು. ಪುನರ್ವಸತಿ ಕೇಂದ್ರಗಳಲ್ಲಿರುವವರಿಗೆ ಆಹಾರಧಾನ್ಯ, ಬಟ್ಟೆ, ಔಷಧಿಗಳನ್ನು ಫೌಂಡೇಶನ್‌ ಕಾರ್ಯಕರ್ತರು ವಿತರಿಸಿದರು. ಪ್ರವಾಹದಿಂದ ಹೆಚ್ಚಿನ ಹಾನಿ ಸಂಭವಿಸಿರುವ ವಯನಾಡ್‌ ಮತ್ತು ಅಲಪ್ಪಿ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದೆ.

ಅಲಪ್ಪಿ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ನೀತಾ ಅಂಬಾನಿ ಅವರು, ‘ಕೇರಳ ಮರು ನಿರ್ಮಾಣಕ್ಕೆ ಕೈಜೋಡಿಸಲು ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ನಮ್ಮ ಫೌಂಡೇಶನ್‌ ಬದ್ಧವಾಗಿದೆ’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು