ಸಾಲಮನ್ನಾ: ಕೇರಳ ಸರ್ಕಾರ ಭರವಸೆ

ಗುರುವಾರ , ಜೂನ್ 20, 2019
26 °C

ಸಾಲಮನ್ನಾ: ಕೇರಳ ಸರ್ಕಾರ ಭರವಸೆ

Published:
Updated:

ತಿರುವನಂತಪುರ: ರೈತರ ಆತ್ಮಹತ್ಯೆ ತಡೆಯಲು ಮಧ್ಯಪ್ರವೇಶಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಮಾಡಿದ ಮನವಿಗೆ ಕೇರಳ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಎರಡು ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಹಾಗೂ ಸಹಕಾರ ಬ್ಯಾಂಕ್‌ಗಳು ಸಾಲ ವಸೂಲಾತಿ ಕ್ರಮಕ್ಕೂ ಸದ್ಯಕ್ಕೆ ತಡೆಯೊಡ್ಡಲು ಕ್ರಮವಹಿಸಲಾಗುವುದು ಎಂದು ಕೇರಳ ಸರ್ಕಾರ ಭರವಸೆ ನೀಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ವಿಧಾನಸಭೆಯಲ್ಲಿ ಈ ವಿಷಯ ಪ್ರಕಟಿಸಿದರು. ಕೇರಳ ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ ಸೋಮವಾರ ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿತು. ಈ ಕುರಿತು ನಿಲುವಳಿ ಸೂಚನೆಯನ್ನು ಮಂಡಿಸಲು ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ಸಭಾತ್ಯಾಗವನ್ನು ಮಾಡಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !