ಸೋಮವಾರ, ಏಪ್ರಿಲ್ 6, 2020
19 °C

ವಿದ್ಯಾರ್ಥಿ ಚಳವಳಿ ನಿಷೇಧ ಕೇರಳ ಸರ್ಕಾರ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಶಾಲಾ–ಕಾಲೇಜುಗಳಲ್ಲಿ ನಡೆಸುವ ಎಲ್ಲಾ ಚಳವಳಿಗಳಿಗೆ ಕೇರಳದ ನ್ಯಾಯಾಲಯ ನಿಷೇಧ ಹೇರಿರುವುದನ್ನು ಕೇರಳದ ಎಡಪಂಥೀಯ ಸರ್ಕಾರ ವಿರೋಧಿಸಿದೆ. 

ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿದ ನಂತರ ಅದರ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಲಿದೆ ಎಂದು ಕೇರಳದ ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ಹೇಳಿದ್ದಾರೆ. 

‘ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಸಂಬಂಧಿತ ಚಟುವಟಿಕೆಗಳಿಗೆ ಇವೆಯೇ ಹೊರತು ಪ್ರತಿಭಟನೆಗಳಿಗೆ ಅಲ್ಲ’ ಎಂದು ಉಲ್ಲೇಖಿಸಿದ ನ್ಯಾಯಾಲಯ ಚಳವಳಿಗಳನ್ನು ನಿಷೇಧಿಸಿತು. ‘ಇತರ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವ ಹಕ್ಕು ಯಾರಿಗೂ ಇಲ್ಲ’ ಎಂದೂ ನ್ಯಾಯಾಲಯ ಹೇಳಿದೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು