ಧರ್ಮ ಬೋಧಿಸಿದರೆ ಶಾಲೆ ಮುಚ್ಚಿಸಿ: ಕೇರಳ ಹೈಕೋರ್ಟ್

ಕೊಚ್ಚಿ: ರಾಜ್ಯದ ಮಾನ್ಯತೆ ಪಡೆದ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದೆ ಧಾರ್ಮಿಕ ಬೋಧನೆ ನಡೆಸುವಂತಿಲ್ಲ ಹಾಗೂ ಧಾರ್ಮಿಕ ಸೂಚನೆ ನೀಡುವಂತಿಲ್ಲ ಎಂದು ಶುಕ್ರವಾರ ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಈ ಕುರಿತು ಆದೇಶ ಹೊರಡಿಸುವಂತೆಯೂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಆದೇಶ ಉಲ್ಲಂಘಿಸುವ ಶಾಲೆಗಳ ಮಾನ್ಯತೆ ರದ್ದುಪಡಿಸಿ, ಮುಚ್ಚಿಸಬೇಕು ಎಂದು ನ್ಯಾಯಮೂರ್ತಿ ಎ. ಮುಹಮ್ಮದ್ ಮುಷ್ತಾಕ್ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.
ನಿರ್ದಿಷ್ಟ ಸಮುದಾಯ ವಿದ್ಯಾರ್ಥಿಗಳಿಗೆ ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡುತ್ತಿದ್ದ ಶಾಲೆಯನ್ನು ಮುಚ್ಚಿಸಲು ಮುಂದಾಗಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಮೂರ್ತಿ ತೀರ್ಪು ನೀಡಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.