ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಕ್ಷನ್‌ 144 ಜಾರಿಗೊಳಿಸಿದ್ದು ಏಕೆ?: ಸರ್ಕಾರಕ್ಕೆ ಕೇರಳ ಹೈಕೋರ್ಟ್‌ ಪ್ರಶ್ನೆ

Last Updated 21 ನವೆಂಬರ್ 2018, 11:14 IST
ಅಕ್ಷರ ಗಾತ್ರ

ಕೊಚ್ಚಿ: ಶಬರಿಮಲೆ ದೇಗುಲ ಸುತ್ತಲಿನ ಪ್ರದೇಶದಲ್ಲಿ ಸೆಕ್ಷನ್‌ 144(ನಿಷೇಧಾಜ್ಞೆ) ಜಾರಿಗೊಳಿಸಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಕೇರಳ ಹೈಕೋರ್ಟ್‌, ವಿವರಣೆ ನೀಡುವಂತೆ ಸೂಚಿಸಿದೆ.

ಅಪರಾಧ ಪ್ರಕ್ರಿಯೆ ಸಂಹಿತೆ(ಸಿಪಿಸಿ) ಅಡಿಯಲ್ಲಿನಿಲಕ್ಕಳ್‌, ಪಂಪಾ ಹಾಗೂ ಸನ್ನಿಧಾನಂ ಪಟ್ಟಣಗಳಲ್ಲಿ ನವೆಂಬರ್‌ 16ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಇದನ್ನುಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದನ್ಯಾಯಾಲಯ, ಯಾವ ಕಾರಣಕ್ಕಾಗಿ ಸೆಕ್ಷನ್‌ 144 ಜಾರಿಗೊಳಿಸಲಾಯಿತು. ಯಾರೆಲ್ಲ ಇದರ ವ್ಯಾಪ್ತಿಗೆ ಬರಲಿದ್ದಾರೆ. ಭಕ್ತರು ಹಾಗೂ ಪ್ರತಿಭಟನಾಕಾರರ ನಡುವಣ ವ್ಯತ್ಯಾಸವನ್ನು ಪೊಲೀಸರು ಹೇಗೆ ಗುರುತಿಸುತ್ತಾರೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರ ನೀಡಬೇಕು ಎಂದು ನಿರ್ದೇಶಿಸಿದೆ.

ದೇವಾಲಯದ ಸುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಿದ್ದ ವೇಳೆ ಕಾನೂನು ಉಲ್ಲಂಘನೆ ಮಾಡಿದ ಆರೋಪದಡಿ69 ಜನರನ್ನು ಬಂಧಿಸಲಾಗಿತ್ತು.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಾವಕಾಶ ಕಲ್ಪಿಸುವಂತೆ ಸುಪ್ರೀಂಕೊರ್ಟ್‌ ಸೆಪ್ಟೆಂಬರ್‌ 28ರಂದು ತೀರ್ಪು ನೀಡಿದ ಬಳಿಕ ಕೇರಳದಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಲೇ ಇವೆ.ಎರಡು ತಿಂಗಳ ಅವಧಿಯ ಮಂಡಲ ಮಕರವಿಲಕ್ಕು ವಾರ್ಷಿಕ ಯಾತ್ರಾ ಋತು ನವೆಂಬರ್‌ 17ರಿಂದ ಆರಂಭವಾಗಿದ್ದು, ಸುಪ್ರೀಂ ತೀರ್ಪಿನ ಬಳಿಕ ಭಾರಿ ಕಟ್ಟೆಚ್ಚರದಲ್ಲಿ ಮೂರನೇ ಬಾರಿಗೆ ದೇವಾಲಯದ ಬಾಗಿಲು ತೆರೆಯಲಾಗಿದೆ.

ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ರಾಜ್ಯದಾದ್ಯಂತ ಪ್ರತಿಭಟನೆಗಳು ಜರುಗಿದ್ದವು. ಈ ವೇಳೆ ಒಟ್ಟು 3,505 ಜನರನ್ನು ಬಂಧಿಸಿದ್ದ ಪೊಲೀಸರು, 529 ಜನರ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT