ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ-ಕೇರಳ ಗಡಿ ಬಂದ್ ವಿಚಾರ: ಕೇಂದ್ರ ಆರೋಗ್ಯ ಇಲಾಖೆಗೆ ಸುಪ್ರೀಂ ಸೂಚನೆ

Last Updated 3 ಏಪ್ರಿಲ್ 2020, 10:43 IST
ಅಕ್ಷರ ಗಾತ್ರ

ನವದೆಹಲಿ: ಕೇರಳ-ಕರ್ನಾಟಕ ಗಡಿ ಬಂದ್ ಪ್ರಕರಣ ಸಂಬಂಧ ಎರಡೂ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದೆ.

ಕಾಸರಗೋಡಿನಿಂದ ಬರುವ ಕೊರೊನಾ ಪೀಡಿತರಿಗೆ ಕರ್ನಾಟಕದ ಕೊಡಗು, ಮಂಗಳೂರಿನಲ್ಲಿ ಹಾಸಿಗೆಗಳು ಸಾಲದು ಎಂಬ ಕಾರಣಕ್ಕಾಗಿ ಕರ್ನಾಟಕ ಕೇರಳ ಗಡಿ ಬಂದ್ ಮಾಡಲಾಗಿತ್ತು. ಈ ಸಂಬಂಧ ಕೇರಳ ಹೈಕೋರ್ಟ್‌‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣ ಇತ್ಯರ್ಥವಾಗದ ಕಾರಣ ಈ ಸಮಸ್ಯೆ ಸುಪ್ರೀಂ ಕೋರ್ಟ್ ತಲುಪಿತ್ತು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಆರೋಗ್ಯ ಮತ್ತು ಕುಟುಂಬಗಳಇಲಾಖೆಯ ಕಾರ್ಯದರ್ಶಿ ಕೂಡಲೆ ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕು. ಅಲ್ಲದೆ, ಕೇರಳದಿಂದ ಬರುವ ಕೊರೊನಾ ಸೋಂಕಿತರು ಕರ್ನಾಟಕದಲ್ಲಿ ಚಿಕಿತ್ಸೆ ಪಡೆಯಲು ಸುಲಭವಾಗಿಸುವಂತೆ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT