ಶನಿವಾರ, ಏಪ್ರಿಲ್ 4, 2020
19 °C

ಅತ್ಯಾಚಾರ ಅಪರಾಧ: ಪಾದ್ರಿ ಉಚ್ಚಾಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕೇರಳದ ಪಾದ್ರಿಯೊಬ್ಬರನ್ನು ಚರ್ಚ್‌ ಕರ್ತವ್ಯದಿಂದ ಉಚ್ಚಾಟಿಸಲಾಗಿದೆ.

‘ಶೂನ್ಯ ಸಹಿಷ್ಣು ನೀತಿಗೆ ಬದ್ಧರಾಗಿರುವ ಪೋಪ್ ಫ್ರಾನ್ಸಿಸ್ ಅವರು ಈ ಕ್ರಮ ತೆಗೆದುಕೊಂಡಿದ್ದಾರೆ. ಪಾದ್ರಿಗೆ ವಹಿಸಲಾಗಿದ್ದ ಎಲ್ಲ ಅಧಿಕಾರಗಳನ್ನು ಹಿಂಪಡೆಯಲಾಗಿದೆ. ಅವರು ಇನ್ನು ಸಾಮಾನ್ಯ ವ್ಯಕ್ತಿಯಂತೆ ಬದುಕಬೇಕಾಗುತ್ತದೆ’ ಎಂದು ಚರ್ಚಿನ ಅಧಿಕಾರಿಗಳು ಹೇಳಿದ್ದಾರೆ. 

ಸೈರೊ ಮಲಬಾರ್‌ ಚರ್ಚಿನ ಪಾದ್ರಿ ರಾಬಿನ್ ವದಕ್ಕುಂಚೇರಿ ವಿರುದ್ಧ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 2017ರಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಳೆದ ವರ್ಷ ಪೋಕ್ಸೊನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 3ಲಕ್ಷ ದಂಡ ವಿಧಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು