ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶದಲ್ಲಿ ತುಶಾರ್ ವೇಳಾಪಲ್ಲಿ ಬಂಧನ

Last Updated 24 ಆಗಸ್ಟ್ 2019, 13:15 IST
ಅಕ್ಷರ ಗಾತ್ರ

ತಿರುವನಂತಪುರ: ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿದ್ದ ಎನ್‌ಡಿಎ ಅಭ್ಯರ್ಥಿ ತುಶಾರ್ ವೇಳಾಪಲ್ಲಿ ಅವರನ್ನು ವಂಚನೆ ಪ್ರಕರಣದಲ್ಲಿ ಯುಎಇ ಪೊಲೀಸರು ಬಂಧಿಸಿದ್ದಾರೆ.

ತುಶಾರ್ ಅವರ ಒಡೆತನದ ನಿರ್ಮಾಣ ಸಂಸ್ಥೆಯು ಯುಎಇಯಲ್ಲೂ ವಹಿವಾಟು ನಡೆಸುತ್ತಿತ್ತು. ಆದರೆ ನಷ್ಟದ ಕಾರಣ ಅಲ್ಲಿ ವ್ಯವಹಾರವನ್ನು ಸ್ಥಗಿತಗೊಳಿಸಿತ್ತು. ಅಲ್ಲಿನ ಕೆಲವು ಸಂಸ್ಥೆಗಳಿಗೆ ಅವರು ಸುಮಾರು ₹ 20 ಕೋಟಿಯಷ್ಟು ಬಾಕಿ ಪಾವತಿಸಿಬೇಕಿತ್ತು. ಅವರು ನೀಡಿದ್ದ ಚೆಕ್‌ ಬೌನ್ಸ್ ಆಗಿತ್ತು. ಈ ಸಂಬಂಧವೇ ಮಾತುಕತೆ ನಡೆಸಲು ಅವರು ಯುಎಇಗೆ ತೆರಳಿದ್ದರು. ಆಗ ಅವರನ್ನು ಬಂಧಿಸಲಾಗಿದೆ.

ತುಶಾರ್ ಅವರ ಬಿಡುಗಡೆಗೆ ನೆರವು ನೀಡುವಂತೆ ಕೋರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT