ಭಾನುವಾರ, ಆಗಸ್ಟ್ 18, 2019
24 °C

ವಯನಾಡ್ ಪುನರ್ವಸತಿ ಕೇಂದ್ರದಲ್ಲಿ ವಿಷ ಆಹಾರ ಸೇವನೆ: 30 ಮಂದಿ ಅಸ್ವಸ್ಥ

Published:
Updated:

ಕಲ್ಪಟ್ಟ: ಪ್ರವಾಹ ಪೀಡಿತ ವಯನಾಡ್ ಜಿಲ್ಲೆಯ ನಿರ್ವಾರಂ ಹೈಯರ್ ಸೆಕೆಂಡರಿ ಶಾಲೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ವಿಷಯುಕ್ತ ಆಹಾರ ಸೇವಿಸಿ 30  ಮಂದಿ ಅಸ್ವಸ್ಥರಾಗಿದ್ದಾರೆ.  ಅಸ್ವಸ್ಥರಾಗಿರುವ ಜನರನ್ನು ಮಾನಂತವಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಲಯಾಳ ಮನೋರಮಾ ಪತ್ರಿಕೆ ವರದಿ ಮಾಡಿದೆ.

ಇದನ್ನೂ  ಓದಿ:  ಕೇರಳ ಮಹಾ ಮಳೆ: ಸತ್ತವರ ಸಂಖ್ಯೆ 76ಕ್ಕೆ ಏರಿಕೆ, 58 ಮಂದಿ ನಾಪತ್ತೆ

ಪ್ರಳಯ ಪೀಡಿತ ಪ್ರದೇಶಗಳಿಗೆ ನಾಳೆ ಭೇಟಿ ನೀಡಲಿದ್ದಾರೆ ಪಿಣರಾಯಿ
 ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಲಿದ್ದಾರೆ.  ಭೂಕುಸಿತ ಮತ್ತು ಮಹಾಮಳೆಗೆ ಇಲ್ಲಿಯವರೆಗೆ 76 ಮಂದಿ ಪ್ರಾಣ ಕಳೆದುಕೊಂಡಿದ್ದು ನಾಪತ್ತೆಯಾದವರ ಸಂಖ್ಯೆ 58 ಆಗಿದೆ ಎಂದು ಸಿಎಂ ಕಚೇರಿ ಹೇಳಿದೆ.

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ವಿಡಿಯೊ ಸಂವಾದ ನಡೆಸಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅರಿತುಕೊಳ್ಳುತ್ತಿದ್ದರು ಪಿಣರಾಯಿ.  ಕೇರಳದಲ್ಲಿ 1654 ಪುನರ್ವಸತಿ ಕೇಂದ್ರಗಳಿದ್ದು 2,87,585 ಮಂದಿ ಇಲ್ಲಿದ್ದಾರೆ. 

ಇದನ್ನೂ  ಓದಿ:
ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಎಲ್ಲ ಬಟ್ಟೆಗಳನ್ನು ಸಂತ್ರಸ್ತರಿಗೆ ನೀಡಿದ ನೌಷಾದ್

ನಮಾಜ್‌ಗೆ ಮುನ್ನ ದೇವಾಲಯದಲ್ಲಿ ದೀಪ ಬೆಳಗಲಿ:ದೇಗುಲ ಸ್ವಚ್ಛಗೊಳಿಸಿದ ಮುಸ್ಲಿಂ ಲೀಗ್

Post Comments (+)