ಮಂಗಳವಾರ, ಜೂನ್ 2, 2020
27 °C

ಕೋವಿಡ್-19: ತಿರುವನಂತಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

kerala

ತಿರುವನಂತಪುರಂ: ಕೋವಿಡ್ 19 ರೋಗ ಬಾಧಿತರಾಗಿದ್ದ 68ರ ಹರೆಯದ ವ್ಯಕ್ತಿಯೊಬ್ಬರು ಮಂಗಳವಾರ ತಿರುವನಂತಪುರಂನಲ್ಲಿ ಸಾವಿಗೀಡಾಗಿದ್ದಾರೆ. ಕೋವಿಡ್‌ನಿಂದಾಗಿ ಕೇರಳದಲ್ಲಿ ಇಲ್ಲಿಯವರಿಗೆ ಎರಡು ಸಾವು ಸಂಭವಿಸಿದೆ.

ಸಾವಿಗೀಡಾದ ವ್ಯಕ್ತಿಗೆ ಕಿಡ್ನಿ ವೈಫಲ್ಯವಿತ್ತು ಎಂದು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧೀಕ್ಷಕರು ಹೇಳಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

 ಮಾರ್ಚ್ 28ರಂದು ಕೊಚ್ಚಿ ವೈದ್ಯಕೀಯ ಕಾಲೇಜಿನಲ್ಲಿ 69ರ ಹರೆಯದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರು.

ಸೋಮವಾರ ಕೇರಳದಲ್ಲಿ 32 ಹೊಸ ಪ್ರಕರಣಗಳು ವರದಿಯಾಗಿದ್ದು 213 ರೋಗಿಗಳು ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ವೇಳೆ 93 ಮತ್ತು 88ರ ಹರೆಯದ ವೃದ್ಧ ದಂಪತಿಗಳು ಚಿಕಿತ್ಸೆ ಪಡೆದು ರೋಗಮುಕ್ತರಾಗಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು