ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರು ತಕ್ಷಣಕ್ಕೆ ಸಾಲಮರುಪಾವತಿ ಮಾಡಬೇಕಿಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

Last Updated 1 ಜೂನ್ 2019, 8:17 IST
ಅಕ್ಷರ ಗಾತ್ರ

ತಿರುವನಂತಪುರ:ರೈತರು ಬ್ಯಾಂಕುಗಳಿಂದಪಡೆದಿರುವ ಕೃಷಿ ಸಾಲ ಸೇರಿದಂತೆ ಇತರೆ ಸಾಲಗಳನ್ನು ಈ ವರ್ಷದ ಅಂತ್ಯದವರೆಗೆ ಮರುಪಾವತಿಮಾಡುವಂತಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಕಟಿಸಿದ್ದಾರೆ.

ಈ ಸಂಬಂಧ ರಾಹುಲ್ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ವಿಜಯನ್ ಈ ವಿಷಯ ತಿಳಿಸಿದ್ದಾರೆ.ರೈತನ ಆತ್ಮಹತ್ಯೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಶೀಘ್ರವೇ ವರದಿ ಸಲ್ಲಿಸುವಂತೆಯೂ ಜಿಲ್ಲಾಧಿಕಾರಿಗೆಆದೇಶಿಸಿರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

ವಯನಾಡಿನಲ್ಲಿ ರೈತನ ಆತ್ಮಹತ್ಯೆ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಿ ಆತನ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕೆಂದು ಮುಖ್ಯಮಂತ್ರಿ ಅವರಿಗೆ ಸಂಸದ ರಾಹುಲ್ ಗಾಂಧಿ ಪತ್ರ ಬರೆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ತಾವು ತೆಗೆದುಕೊಂಡ ಕ್ರಮದ ಬಗ್ಗೆರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ವಿಜಯನ್ಪತ್ರ ಬರೆದು ವಿವರಿಸಿದ್ದಾರೆ.

ಮೇ 31 ರಂದು ಪತ್ರಬರೆದಿದ್ದು, ಕೇರಳ ಸರ್ಕಾರ ರೈತರ ಸಮಸ್ಯೆಗಳ ಪರಿಹಾರದ ಕುರಿತು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ಈ ವರ್ಷದ ಡಿಸೆಂಬರ್ ಅಂತ್ಯದವರೆಗೆ ರೈತರು ಯಾವುದೇ ಸಾಲವನ್ನು ಮರುಪಾವತಿ ಮಾಡುವುದನ್ನುತಡೆ ಹಿಡಿಯಲಾಗಿದೆ.ದೇಶದಾದ್ಯಂತ ರೈತರುವಾಣಿಜ್ಯಬ್ಯಾಂಕುಗಳು ಹಾಗೂ ಸ್ಥಳೀಯ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಕೃಷಿ ಸಂಬಂಧಿತ ಸಾಲಗಳಿಗೆ ಅಧಿಕ ಬಡ್ಡಿ ಪಾವತಿಸಲಾಗದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ವಾಣಿಜ್ಯ ಬ್ಯಾಂಕುಗಳ ಸಾಲಗಳು ಸರ್ಫೇಸಿ (SARFAESI) ಕಾಯ್ದೆಯಡಿ ಬರುವುದರಿಂದ ಈ ಬ್ಯಾಂಕುಗಳಲ್ಲಿ ಬಾಕಿ ಇರುವ ರೈತರ ಸಾಲಗಳ ಮರುಪಾವತಿ ಕುರಿತ ಯಾವುದೇ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅವಕಾಶ ಇದೆ. ಈಗ ಕೇಂದ್ರ ಸರ್ಕಾರಒಂದು ನಿರ್ಧಾರ ಕೈಗೊಳ್ಳಬೇಕಿದೆ. ಈ ವಿಷಯದ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕು. ಈ ಕಾರ್ಯದಲ್ಲಿನೀವು ನಮ್ಮ ಜೊತೆ ಸೇರುತ್ತೀರಿ ಎಂಬ ನಂಬಿಕೆ ಇದೆ. ಪರಿಹಾರ ಸಿಕ್ಕಿದಲ್ಲಿ ಸಾಲದಿಂದ ನರಳುತ್ತಿರುವ ಕೇರಳದ ರೈತರ ಜೊತೆ ಇಡೀ ದೇಶದ ರೈತರು ಈ ಸಮಸ್ಯೆಯಿಂದ ಹೊರಬರಲು ಸಹಕಾರಿಯಾಗುತ್ತದೆ ಎಂದಿದ್ದಾರೆ.

ವಯನಾಡಿನ ಗ್ರಾಮವೊಂದರಲ್ಲಿ ರೈತ ವಿ.ಡಿ.ದಿನೇಶ್ ಕುಮಾರ್ ಎಂಬುವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಸಂಸದ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸಿ ಆರ್ಥಿಕ ಸಹಾಯ ನೀಡುವಂತೆ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT