ಶುಕ್ರವಾರ, ಏಪ್ರಿಲ್ 23, 2021
32 °C

ವಿಡಿಯೊ | ಕೊಚ್ಚಿಯಲ್ಲಿ 800 ಕೆ.ಜಿ ಸ್ಫೋಟಕ ಬಳಸಿ ಗಗನಚುಂಬಿ ಕಟ್ಟಡಗಳ ನೆಲಸಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಚ್ಚಿ: ಇಲ್ಲಿನ ಮರಡು ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಕೇರಳ ಸರ್ಕಾರ ಆರಂಭಿಸಿದ್ದು ಶನಿವಾರ ಎರಡು ಕಟ್ಟಡಗಳನ್ನು ಮತ್ತು ಭಾನುವಾರ ಎರಡು ಕಟ್ಟಡಗಳನ್ನು ನೆಲಸಮಗೊಳಿಸಿದೆ.

ನದಿ ದಂಡೆಯ ಪಕ್ಕದಲ್ಲಿ ಹಾಗೂ ಕಟ್ಟಡ ಪರವಾನಿಗೆಯ ನಿಯಾವಳಿಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದ್ದ  ಕಟ್ಟಡಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ತೆರವು ಕಾರ್ಯಾಚರಣೆ ಆರಂಭಿಸಿದ್ದು ಈ ಕಾರ್ಯಾಚರಣೆ ನಾಳೆಯೂ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

19 ಮತ್ತು 21 ಅಂತಸ್ತಿನ ಎರಡು ದೊಡ್ಡ ಅಪಾರ್ಟ್‌ಮೆಂಟ್‌ಗಳು ಸೇರಿದಂತೆ ಎರಡು ಚಿಕ್ಕ ಕಟ್ಟಡಗಳನ್ನು ತೆರವು ಮಾಡಲಾಗಿದೆ. 800 ಕೆ.ಜಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ  ಕಟ್ಟಡಗಳನ್ನು ನೆಲಸಮ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೋಡ ನೋಡುತ್ತಿದ್ದಂತೆಯೇ ಎರಡು ಗಗನಚುಂಬಿ ಅಪಾರ್ಟ್‌ಮೆಂಟ್‌ಗಳು ನೆಲಕ್ಕುರುಳಿ ದೂಳಿನಲ್ಲಿ ಕಣ್ಮೆರೆಯಾದವು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಕಟ್ಟಡ ಕಟ್ಟುವಾಗ ಕಾನೂನು ನಿಯಮಗಳನ್ನು ಗಾಳಿಗೆ ತೂರಲಾಗಿತ್ತು ಹಾಗೂ ನದಿ ಮೀಸಲು ಪ್ರದೇಶದಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಹಲವು ವರ್ಷಗಳಿಂದ ವಿಚಾರಣೆ ನಡೆದಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್‌ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರಿಂದ ಈ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಕೇರಳ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡಗಳಲ್ಲಿ ವಾಸವಿದ್ದ ಜನರನ್ನು ಖಾಲಿ ಮಾಡಿಸಲಾಗಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದಲ್ಲಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು