ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಲೆಮರೆಸಿಕೊಂಡ ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್

Last Updated 14 ಸೆಪ್ಟೆಂಬರ್ 2019, 13:14 IST
ಅಕ್ಷರ ಗಾತ್ರ

ಕೋಲ್ಕತ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರು ಸಿಬಿಐ ತನಿಖೆಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.

ಶನಿವಾರ ಅವರ ಮನೆಗೆ ತೆರಳಿದ್ದ ಸಿಬಿಐ ತಂಡಕ್ಕೆ ರಾಜೀವ್ ಕುಮಾರ್ಸಿಗಲಿಲ್ಲ. ಅಲ್ಲದೆ, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಸಿಬಿಐ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರಾಜೀವ್ ಕುಮಾರ್ ಕಂಡರೆ ವಿಷಯ ತಿಳಿಸುವಂತೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದೆ.

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ತನಗೆ ಬಂಧನದಿಂದ ವಿನಾಯಿತಿ ನೀಡಬೇಕೆಂದು ಕೋರಿನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ರಾಜೀವ್ ಕುಮಾರ್ ಅವರ ಅರ್ಜಿಯನ್ನು ತಳ್ಳಿಹಾಕಿತು.

ಆ ನಂತರ ಕಾರ್ಯಾಚರಣೆಗೆ ಇಳಿದ ಸಿಬಿಐಗೆ ರಾಜೀವ್ ಕುಮಾರ್ ಇನ್ನೂ ಸಿಕ್ಕಿಲ್ಲ. 2014ರಲ್ಲಿ ನಡೆದ ₹ 2, 460 ಕೋಟಿ ಶಾರದಾ ಚಿಟ್ ಫಂಡ್ ಹಗರಣ ನಡೆದಾಗ ರಾಜೀವ್ ಕುಮಾರ್ ವಿಶೇಷ ತನಿಖಾ ತಂಡದ ನೇತೃತ್ವ ವಹಿಸಿದ್ದರು. ಆ ಸಮಯದಲ್ಲಿ ದಾಖಲೆಗಳನ್ನು ತಿದ್ದಿದ ಆರೋಪ ಎದುರಿಸುತ್ತಿದ್ದಾರೆ.

ರಾಜೀವ್ ಕುಮಾರ್ ಕೊಲ್ಕತಾದ ಪೊಲೀಸ್ ಆಯುಕ್ತರಾಗಿದ್ದ ಸಮಯದಲ್ಲಿ ಸಿಬಿಐ ಅವರನ್ನು ವಿಚಾರಣೆಗೆ ಕರೆದೊಯ್ಯಲು ಹೋದಾಗ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT