ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲ್ಯಾಂಡಿಂಗ್‌ ಗೇರ್‌ ಬಾಗಿಲು ಮುಚ್ಚಿ ಸ್ಪೈಸ್‌ಜೆಟ್‌ ಸಿಬ್ಬಂದಿ ಸಾವು

Last Updated 10 ಜುಲೈ 2019, 18:31 IST
ಅಕ್ಷರ ಗಾತ್ರ

ನವದೆಹಲಿ: ಕೋಲ್ಕತ್ತದ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಸಂಸ್ಥೆಯ ವಿಮಾನದ ಲ್ಯಾಂಡಿಂಗ್‌ ಗೇರ್‌ನ ಬಾಗಿಲನ್ನು ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಟೆಕ್ನೀಷಿಯನ್‌ವೊಬ್ಬರು ಬುಧವಾರ ಮೃತಪಟ್ಟಿದ್ದಾರೆ.

ರೋಹಿತ್‌ ಪಾಂಡೆ (22) ಮೃತ ದುರ್ದೈವಿ. ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ,ಲ್ಯಾಂಡಿಂಗ್‌ ಗೇರ್‌ನ ಹೈಡ್ರಾಲಿಕ್‌ ಬಾಗಿಲುಗಳ ಮಧ್ಯೆ ಸಿಕ್ಕಿ ಹಾಕಿಕೊಂಡ ಪರಿಣಾಮ ರೋಹಿತ್‌ ಮೃತಪಟ್ಟ ಎಂದು ತಿಳಿದು ಬಂದಿದೆ.

ಬಂಬಾರ್ಡಿಯರ್ ಕ್ಯೂ400 ವಿಮಾನದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ಕಂಪನಿ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT