ಭೀಮಾ ಕೋರೆಗಾಂವ್ ಪ್ರಕರಣ: ಹಿಂದೆ ಸರಿದ ಸಿಜೆಐ

ನವದೆಹಲಿ: ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಗೌತಮ್ ನವಲಖಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಿಂದೆ ಸರಿದಿದ್ದಾರೆ.
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ರಂಜನ್ ಗೊಗೊಯಿ, ಎಸ್.ಎ. ಬೊಬ್ದೆ ಹಾಗೂ ಎಸ್. ಅಬ್ದುಲ್ ನಜೀರ್ ಅವರ ಪೀಠದ ಮುಂದೆ ತರಲಾಗಿತ್ತು. ಇದರಿಂದ ಗೊಗೊಯಿ ಅವರು ಹಿಂದೆ ಸರಿದಿದ್ದು, ಪ್ರಕರಣವನ್ನು ‘ನಾನು ಸದಸ್ಯನಾಗಿರದ ಪೀಠದ ಮುಂದೆ ತನ್ನಿರಿ’ ಎಂದು ಅಧಿಕಾರಿಗೆ ಸೂಚಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.