ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ರಾಜಕೀಯ: ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರಿಂದ ಎಡಿಜಿಪಿ ಭೇಟಿ

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು
Last Updated 13 ಮಾರ್ಚ್ 2020, 9:15 IST
ಅಕ್ಷರ ಗಾತ್ರ

ಬೆಂಗಳೂರು: ರೆಸಾರ್ಟ್‌ನಲ್ಲಿರುವ ಮಧ್ಯಪ್ರದೇಶದಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡಬೇಕೆಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡ ಜಿತು ಪಟ್ವಾರಿ ಅವರಿದ್ದ ತಂಡರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) (ಕಾನೂನು ಮತ್ತು ಸುವ್ಯವಸ್ಥೆ)ರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ಕೇಂದ್ರ ಕಚೇರಿಯಲ್ಲಿರುವ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು,ರೆಸಾರ್ಟ್ ನಲ್ಲಿರುವ ಶಾಸಕರು ನಮ್ಮ ಪಕ್ಷದವರು. ಅಲ್ಲಿರುವ ಕೆಲ ಬಿಜೆಪಿ ಶಾಸಕರು ಅವರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ. ಪೊಲೀಸರು ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣಬೈರೇಗೌಡ ಹಾಗೂ ಇತರರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT