ಮಿಜೋರಾಂ ರಾಜ್ಯಪಾಲರ ಹುದ್ದೆಗೆ ಕುಮ್ಮನಂ ರಾಜಶೇಖರನ್ ರಾಜೀನಾಮೆ

ಶುಕ್ರವಾರ, ಮಾರ್ಚ್ 22, 2019
24 °C
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ

ಮಿಜೋರಾಂ ರಾಜ್ಯಪಾಲರ ಹುದ್ದೆಗೆ ಕುಮ್ಮನಂ ರಾಜಶೇಖರನ್ ರಾಜೀನಾಮೆ

Published:
Updated:

ನವದೆಹಲಿ: ಮಿಜೋರಾಂ ರಾಜ್ಯಪಾಲರ ಹುದ್ದೆಗೆ ಕುಮ್ಮನಂ ರಾಜಶೇಖರನ್ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ರಾಜಶೇಖರನ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.

ಸದ್ಯ ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ಅವರಿಗೆ ಹೆಚ್ಚುವರಿಯಾಗಿ ಮಿಜೋರಾಂನ ರಾಜ್ಯಪಾಲರ ಹೊಣೆ ವಹಿಸಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜತೆ ಸುದೀರ್ಘ ಅವಧಿಯಿಂದ ನಂಟು ಹೊಂದಿರುವ ರಾಜಶೇಖರನ್ ಅವರು 2018ರ ಮೇ 25ರಂದು ಮಿಜೋರಾಂನ ರಾಜ್ಯಪಾಲರಾಗಿ ನೇಮಕಗೊಂಡಿದ್ದರು.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ: ಕುಮ್ಮನಂ ರಾಜಶೇಖರನ್ ಬಿಜೆಪಿಯ ಕೇರಳ ಘಟಕದ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಕಾರಣಕ್ಕಾಗಿಯೇ ಅವರು ರಾಜೀನಾಮೆ ನೀಡಿರಬಹುದು ಎಂದೂ ಹೇಳಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !