ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ ಪ್ರದೇಶ | ಸಂಸದ ಸಂಜೀವ್‌ ಕುಮಾರ್ ಕುಟುಂಬದ ಆರು ಜನರಿಗೆ ಕೋವಿಡ್–19 ದೃಢ

Last Updated 27 ಏಪ್ರಿಲ್ 2020, 1:18 IST
ಅಕ್ಷರ ಗಾತ್ರ

ಹೈದರಾಬಾದ್‌: ಆಂಧ್ರ ಪ್ರದೇಶ ಸಂಸದ ಡಾ. ಸಂಜೀವ್‌ ಕುಮಾರ್‌ ಅವರ ಕುಟುಂಬದ ಆರು ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಅವರ 80 ವರ್ಷ ವಯಸ್ಸಿನ ತಂದೆ, ಹೆಂಡತಿ, ಇಬ್ಬರು ಸಹೋದರರು ಹಾಗೂ ಇನ್ನಿಬ್ಬರು ಸೋಂಕಿತರಾಗಿದ್ದಾರೆ.

ಇವರಿಗೆ ಸೋಂಕು ತಗುಲಿರುವುದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಜೀವ್ ಕುಮಾರ್‌, ‘ಸೋಂಕು ದೃಢಪಟ್ಟಿರುವ ಆರು ಜನರೂ ಸ್ಥಿರವಾಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ. ಎಲ್ಲರಗೂ ಕರ್ನೂಲ್‌ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ನಿಯಮದಂತೆ ಪ್ರತ್ಯೇಕವಾಸದಲ್ಲಿರಲಿದ್ದಾರೆ. ನಾವೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ’ ಎಂದು ಹೇಳಿದ್ದಾರೆ.

‘ಕುಟುಂಬದವರಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ನಾವು ಎಲ್ಲ ಮೂಲಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದಿದ್ದಾರೆ.

ಸಂಜೀವ್‌ ಕುಮಾರ್‌ ಅವರು, ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದಿಂದ ಕರ್ನೂಲ್‌ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಕುಟುಂಬ ಕರ್ನೂಲ್‌ನ ನರಸಿಂಗರಾವ್‌ ಪೆಟಾದಲ್ಲಿ ನೆಲಸಿದೆ.

ಆಂಧ್ರ ಪ್ರದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ 1,097 ಕ್ಕೆ ತಲುಪಿದೆ.ಕರ್ನೂಲ್ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು (279) ವರದಿಯಾಗಿವೆ. ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ವಾಪಸ್‌ ಆದ ನಂತರ ಜಿಲ್ಲೆಯಲ್ಲಿ ಸೋಂಕು ಪ್ರಕಣಗಳು ಹೆಚ್ಚಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT