ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಕ್ಷೇತ್ರದಿಂದ ಜೆಡಿಎಸ್ ಔಟ್

Last Updated 28 ಏಪ್ರಿಲ್ 2018, 10:07 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರು ನವಲಗುಂದ ಕ್ಷೇತ್ರ ಚುನಾವಣೆಯ ಕಣದಲ್ಲುಳಿಯುವ ಮೂಲಕ ಬಂಡಾಯ ಮುಂದುವರಿಸಿದ್ದಾರೆ. ಇನ್ನೊಂದೆಡೆ ಹುಬ್ಬಳ್ಳಿ–ಧಾರವಾಡ ಪಶ್ಚಿಮ ಕ್ಷೇತ್ರದ ಅಭ್ಯರ್ಥಿ ಅಲ್ತಾಫ್‌ ಕಿತ್ತೂರ ಅವರು ನಾಮಪತ್ರ ಹಿಂತೆಗೆದುಕೊಳ್ಳುವ ಮೂಲಕ ಜೆಡಿಎಸ್‌ ನಾಯಕರಿಗೆ ಶಾಕ್‌ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ನಂತರವೂ ಕರಿಗಾರ ನಾಮಪತ್ರ ಹಿಂತೆಗೆದುಕೊಂಡಿಲ್ಲ. ಇದೇ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿದ್ದ ಅಣ್ಣಿಗೇರಿ ಕ್ಲಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಪ್ರಕಾಶ ಅಂಗಡಿ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಅಂಗಡಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಹದಾಯಿ ಕಳಸಾ–ಬಂಡೂರಿ ಪಕ್ಷಾತೀತ ಹೋರಾಟ ಸಮಿತಿಯ ಅಧ್ಯಕ್ಷ ಲೋಕನಾಥ ಹೆಬಸೂರ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಈ ಕುರಿತು ‘ಪ್ರಜಾವಾಣಿ’ ಗೆ ಪ್ರತಿಕ್ರಿಯಿಸಿ, ‘ಬೆಂಬಲಿಗರ ಸಲಹೆ ಮೇರೆಗೆ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ಹೋರಾಟ ಮುಂದುವರಿಯಲಿದೆ. ಯಾವ ಸರ್ಕಾರ ಬರುತ್ತದೆಯೋ, ಅವರ ಮೇಲೆ ಸಮಸ್ಯೆ ಬಗೆಹರಿಸುವಂತೆ ಒತ್ತಡ ಹಾಕಲಾಗುವುದು’ ಎಂದರು.

ಪಕ್ಷದ ನಾಯಕರು ತಮ್ಮನ್ನು ಕಡೆಗಣಿಸಿದ್ದನ್ನು ಖಂಡಿಸಿ ನಾಮಪತ್ರ ಹಿಂಪಡೆಯುತ್ತಿರುವುದಾಗಿ ಅಲ್ತಾಫ್ ಕಿತ್ತೂರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಹಾಗಾಗಿ, ಪಶ್ಚಿಮ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಇಲ್ಲದಂತಾಗಿದೆ.

ಹುಬ್ಬಳ್ಳಿ–ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ, ಕಾಂಗ್ರೆಸ್‌n ಅಭ್ಯರ್ಥಿ ಬಂಡಾಯ ಅಭ್ಯರ್ಥಿ ಮೋಹನ ಹಿರೇಮನಿ ಅವರೂ ನಾಮಪತ್ರ ಹಿಂತೆಗೆ ದುಕೊಂಡಿದ್ದರಿಂದ ಈ ಕ್ಷೇತ್ರಗಳಲ್ಲಿನ ಬಂಡಾಯ ಶಮನಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT