ಬುಧವಾರ, ಜುಲೈ 28, 2021
23 °C

ನವದೆಹಲಿ: ಶ್ರಮಶಕ್ತಿ ಭವನದ 11 ಸಿಬ್ಬಂದಿಗೆ ಕೋವಿಡ್‌–19 ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ 11 ಸಿಬ್ಬಂದಿಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. 

‘ಸಚಿವಾಲಯದ ಜಂಟಿ ಕಾರ್ಯದರ್ಶಿ, ಸ್ಟೆನೊಗ್ರಾಫರ್, ಪ್ರಧಾನ ಕಾರ್ಯದರ್ಶಿ, ಖಾಸಗಿ ಕಾರ್ಯದರ್ಶಿ, ಆರು ಮಂದಿ ಸಹಾಯಕರು ಮತ್ತು ವಾಹನ ಚಾಲಕಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಆರಂಭಿಕ ಪರೀಕ್ಷೆಯಲ್ಲಿ ಕಾರ್ಮಿಕ ಕಾರ್ಯದರ್ಶಿ ಮತ್ತು ಹೆಚ್ಚುವರಿ ಕಾರ್ಯದರ್ಶಿಗೆ ಕೋವಿಡ್‌–19 ಇರುವುದು ದೃಢಪಟ್ಟಿತ್ತು’ ಎಂದು ಮೂಲಗಳು ಹೇಳಿವೆ.

ಕಳೆದ ವಾರ ಇಬ್ಬರು ಸಿಬ್ಬಂದಿಗೆ ಕೋವಿಡ್‌–19 ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವಾಲಯದ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಜೂನ್ 4 ಮತ್ತು 5ರಂದು ಸಚಿವಾಲಯದ ಶ್ರಮಶಕ್ತಿ ಭವನ ಕಟ್ಟಡವನ್ನು ಸೋಂಕುಮುಕ್ತಗೊಳಿಸುವ ಕಾರಣಕ್ಕಾಗಿ ಮುಚ್ಚಲಾಗಿತ್ತು. 

ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಶ್ರಮಶಕ್ತಿ ಭವನ  ಸೋಮವಾರ ತೆರೆಯುವ ನಿರೀಕ್ಷೆ ಇದೆ. ಈ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಗುರುವಾರ ಮತ್ತು ಶುಕ್ರವಾರ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು