ಭಾನುವಾರ, ಜುಲೈ 25, 2021
24 °C

ಭಾರತ-ಚೀನಾ ಸಂಘರ್ಷ: ಹಿಮಾಚಲ ಪ್ರದೇಶದ ಎರಡು ಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Himachala pradesh

ಶಿಮ್ಲಾ: ಪೂರ್ವ ಲಡಾಖ್‌ನ ಗಲ್ವಾನ್‌ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆ ಹಿನ್ನೆಲೆಯಲ್ಲಿ ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಹಿಮಾಚಲ ಪ್ರದೇಶ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸ್ಥಳೀಯ ಜನರ ಸುರಕ್ಷತೆಗಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕಿನ್‌ಔರ್‌ ಮತ್ತು ಲಹೌಲ್-ಸ್ಪಿಟಿ ಜಿಲ್ಲೆಗಳ ಪೊಲೀಸರಿಗೆ ಎಚ್ಚರಿಕೆ ಮತ್ತು ಸಲಹೆ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ವಕ್ತಾರ ಖುಶಾಲ್ ಶರ್ಮಾ ತಿಳಿಸಿದ್ದಾರೆ.

ಚೀನಾದ ಸೇನಾಪಡೆಗಳೊಂದಿಗೆ ಸೋಮವಾರ ರಾತ್ರಿ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು