ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾಕ್ಕೆ ತಕ್ಕ ಉತ್ತರ: ಶಿವಸೇನಾ ಆಗ್ರಹ

Last Updated 17 ಜೂನ್ 2020, 8:29 IST
ಅಕ್ಷರ ಗಾತ್ರ

ಮುಂಬೈ: ಲಡಾಖ್‌ ಗಡಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣ ಮಾಡಿ, ಭಾರತೀಯ ಯೋಧರನ್ನು ಹತ್ಯೆಗೆ ಕಾರಣವಾಗಿರುವ ಚೀನಾಕ್ಕೆ ತಕ್ಕ ಉತ್ತರ ನೀಡುವಂತೆ ಶಿವಸೇನಾ ಬುಧವಾರ ಆಗ್ರಹಿಸಿದೆ.

ಗಾಲ್ವನ್‌ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದಲ್ಲಿ ಭಾರತೀಯ ಸೇನೆಯ ತುಕಡಿಯೊಂದರ 20 ಯೋಧರು ಹುತಾತ್ಮರಾಗಿದ್ದಾರೆ.

ರಾಜ್ಯಸಭಾ ಸದಸ್ಯ ಹಾಗೂ ಶಿವಸೇನಾ ಮುಖವಾಣಿ ‘ಸಾಮ್ನಾ’ದ ಕಾರ್ಯನಿರ್ವಾಹಕ ಸಂಪಾದಕರೂ ಆಗಿರುವ ಸಂಜತ್‌ ರಾವುತ್‌, ‘ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಧೈರ್ಯವಂತರು. ನಿಮ್ಮ ನಾಯಕತ್ವದಲ್ಲಿ ದೇಶವು ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಲಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

‘ಚೀನಾಕ್ಕೆ ಯಾವಾಗ ತಕ್ಕ ಪ್ರತ್ಯುತ್ತರ ನೀಡಲಾಗುವುದು? ಈಗಿನ ಪರಿಸ್ಥಿತಿಯಲ್ಲಿ ಇಡೀ ದೇಶವೇ ಪ್ರಧಾನಿ ಜೊತೆ ನಿಂತಿದೆ. ಆದರೆ ಸತ್ಯ ಏನು ಎಂಬುದನ್ನು ತಿಳಿದುಕೊಳ್ಳಲು ದೇಶ ಬಯಸುತ್ತದೆ. ಜೈ ಹಿಂದ್‌’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

‘ಒಂದೇ ಒಂದು ಗುಂಡು ಹಾರದೇ ನಮ್ಮ 20 ಯೋಧರು ಹುತಾತ್ಮರಾಗಿದ್ದಾರೆ. ನಮ್ಮವರು ಏನು ಮಾಡುತ್ತಿದ್ದರು? ಚೀನಾದ ಎಷ್ಟು ಯೋಧರು ಸತ್ತಿದ್ದಾರೆ? ಎಂದೂ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT